ಶುಕ್ರವಾರ, ಮೇ 14, 2021
31 °C

ಖಾಸಗಿ ಆಸ್ಪತ್ರೆಗಳ ಸಹಕಾರ ಅಗತ್ಯ: ಸಚಿವ ಎಸ್.ಟಿ.ಸೋಮಶೇಖರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಕೋವಿಡ್ ಎರಡನೇ ಅಲೆ ಉಲ್ಬಣಗೊಳ್ಳುತ್ತಿದೆ. ಜನರಿಗೆ ಸಮಸ್ಯೆಯಾಗದಂತೆ ಖಾಸಗಿ ಆಸ್ಪತ್ರೆಗಳ ಸಹಕಾರ ಬಹಳ ಮುಖ್ಯ. ನಮಗಾಗಿ ನೀವಿದ್ದರೆ, ನಿಮಗೆ ನಾವಿರುತ್ತೇವೆ’ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಖಾಸಗಿ ಆಸ್ಪತ್ರೆ ಮುಖ್ಯಸ್ಥರಿಗೆ ತಿಳಿಸಿದರು.

ಕೋವಿಡ್ ನಿಯಂತ್ರಣ ಸಂಬಂಧ ಯಶವಂತಪುರ ವಿಧಾನಸಭಾ ಕ್ಷೇತ್ರದ ಖಾಸಗಿ ಆಸ್ಪತ್ರೆ ಮುಖ್ಯಸ್ಥರ ಸಭೆ ಜೊತೆ ಅವರು ಶನಿವಾರ ಸಭೆ ನಡೆಸಿದರು.

‘ಯಶವಂತಪುರ ವ್ಯಾಪ್ತಿಯ ಖಾಸಗಿ ಆಸ್ಪತ್ರೆಗಳಲ್ಲಿ 761 ಹಾಸಿಗೆಗಳಿದ್ದು, ಅವುಗಳಲ್ಲಿ ಪಾಲಿಕೆ ಸುಪರ್ದಿಗೆ 405 ಹಾಸಿಗೆಗಳನ್ನು ಕೊಡಬೇಕಿತ್ತು. ಆದರೆ, ಈವರೆಗೆ 268 ಹಾಸಿಗೆಗಳನ್ನು ಮಾತ್ರ ನೀಡಿರುವುದು ಸರಿಯಲ್ಲ. ಕ್ಷೇತ್ರದಲ್ಲಿ ಸರ್ಕಾರಿ ಆಸ್ಪತ್ರೆಯಿಲ್ಲ, ಖಾಸಗಿ ಆಸ್ಪತ್ರೆಗಳು ಹೆಚ್ಚಾಗಿ ಇವೆ. ಈಗಿನ ಪರಿಸ್ಥಿತಿಯಿಂದ ಪಾರಾಗಲು ಖಾಸಗಿ ಆಸ್ಪತ್ರೆಗಳ ಸಹಕಾರ ಬೇಕು. ಕ್ಷೇತ್ರದಿಂದ ದೂರುಗಳು ಬರುತ್ತಿವೆ. ಎಲ್ಲರೂ ಒಟ್ಟಾಗಿ ಕೋವಿಡ್  ವಿರುದ್ಧ ಹೋರಾಡಬೇಕು’ ಎಂದರು.

ವಲಯ ಆಯುಕ್ತ ರೆಡ್ಡಿ ಶಂಕರ್ ಬಾಬು, ಉಪ ವಿಭಾಗಾಧಿಕಾರಿ ಶಿವಣ್ಣ ಹಾಗೂ ಇತರರು ಸಭೆಯಲ್ಲಿ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.