ಬುಧವಾರ, ಜನವರಿ 27, 2021
18 °C

ವಿದ್ಯಾರ್ಥಿ ಬಸ್‌ಪಾಸ್‌: 31ರವರೆಗೆ ಮಾನ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯು ತರಗತಿಗಳು ಆರಂಭವಾಗಿರುವುದರಿಂದ ವಿದ್ಯಾರ್ಥಿಗಳ ಹಳೆಯ ಬಸ್‌ ಪಾಸ್‌ನ ಅವಧಿಯನ್ನು ಇದೇ ತಿಂಗಳ 31ರವರೆಗೆ ವಿಸ್ತರಿಸಲಾಗಿದೆ.

2019–20ನೇ ಸಾಲಿನಲ್ಲಿ ವಿತರಿಸಲಾಗಿದ್ದ ವಿದ್ಯಾರ್ಥಿಗಳ ಬಸ್‌ ಪಾಸುಗಳಲ್ಲಿ 2020ರ ಡಿ.31ರವರೆಗೆ ಮಾತ್ರ ಮಾನ್ಯ ಮಾಡಲು ರಾಜ್ಯ ರಸ್ತೆ ಸಾರಿಗೆ ನಿಗಮವು ನಿರ್ಧಾರ ಕೈಗೊಂಡಿತ್ತು. ಈಗ ಪಾಸ್‌ಗಳ ಅವಧಿಯನ್ನು ಒಂದು ತಿಂಗಳು ವಿಸ್ತರಿಸಲಾಗಿದೆ.

ವಿದ್ಯಾರ್ಥಿಗಳು ಕಳೆದ ವರ್ಷದ (2019–20) ಬಸ್‌ ಪಾಸ್‌ನೊಂದಿಗೆ ಪ್ರಸ್ತುತ ಸಾಲಿನಲ್ಲಿ ಶಾಲಾ/ಕಾಲೇಜುಗಳಿಗೆ ಪಾವತಿಸಿರುವ ರಸೀದಿಯನ್ನು ತೋರಿಸಿ ಪ್ರಯಾಣಿಸಬಹುದು ಎಂದು ಕೆಎಸ್‌ಆರ್‌ಟಿಸಿ ಹೇಳಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.