ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜಂತುಹುಳು ಮಾತ್ರೆ ಸೇವಿಸಿ ವಿದ್ಯಾರ್ಥಿನಿ ಸಾವು

ಉರ್ದು ಶಾಲೆ, ಆಸ್ಪತ್ರೆ ವಿರುದ್ಧ ಎಫ್‌ಐಆರ್‌ ದಾಖಲು
Published 28 ಫೆಬ್ರುವರಿ 2024, 16:44 IST
Last Updated 28 ಫೆಬ್ರುವರಿ 2024, 16:44 IST
ಅಕ್ಷರ ಗಾತ್ರ

ಬೆಂಗಳೂರು: ಶಾಲೆಯಲ್ಲಿ ನೀಡಲಾಗಿದ್ದ ನಾಲ್ಕು ಜಂತುಹುಳು ಮಾತ್ರೆಗಳನ್ನು ಸೇವಿಸಿ, ಅಸ್ವಸ್ಥಗೊಂಡಿದ್ದ 9 ವರ್ಷದ ವಿದ್ಯಾರ್ಥಿನಿ ಮಂಗಳವಾರ ರಾತ್ರಿ ಮೃತಪಟ್ಟಿದ್ದಾಳೆ. ಜೋಯಾ ಖಾನ್‌ ಮೃತ ವಿದ್ಯಾರ್ಥಿನಿ.

‘ನಿರ್ಲಕ್ಷ್ಯ ವಹಿಸಿದ ಆರೋಪದ ಮೇರೆಗೆ ಬನಶಂಕರಿ 2ನೇ ಹಂತದ ಕರಿಸಂದ್ರ ಸರ್ಕಾರಿ ಉರ್ದು ಶಾಲೆ ಹಾಗೂ ಸರಿಯಾಗಿ ಚಿಕಿತ್ಸೆ ನೀಡದ ಬನಶಂಕರಿಯ ಸೇವಾಕ್ಷೇತ್ರ ಆಸ್ಪತ್ರೆ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ’ ಎಂದು ಬನಶಂಕರಿ ಠಾಣೆ ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

‘ಮನೆಗೆ ಬಂದು ಮಾತ್ರೆಗಳನ್ನು ಸೇವಿಸಿದ್ದರಿಂದ ವಿದ್ಯಾರ್ಥಿನಿ ಅಸ್ವಸ್ಥಗೊಂಡಿದ್ದಳು. ತಕ್ಷಣವೇ ಆಕೆಯನ್ನು ಸೇವಾಕ್ಷೇತ್ರ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಸರಿಯಾದ ಚಿಕಿತ್ಸೆ ನೀಡದೇ ಮನೆಗೆ ಕಳುಹಿಸಿದ್ದರು. ಮನೆಗೆ ಬಂದ ಮೇಲೆ ಮತ್ತೆ ಬಳಲಿದಂತೆ ಕಂಡ ವಿದ್ಯಾರ್ಥಿನಿಯನ್ನು ಪೋಷಕರು ಮತ್ತೆ ಆಸ್ಪತ್ರೆಗೆ ಕರೆದೊಯ್ದಿದ್ದರು. ಆಗಲೂ ಚಿಕಿತ್ಸೆ ನೀಡಿರಲಿಲ್ಲ ಎಂಬ ಆರೋಪವಿದೆ’ ಎಂದು ಪೊಲೀಸರು ಹೇಳಿದರು.

‘ಶಿಕ್ಷಕರೇ ನಿರ್ಲಕ್ಷ್ಯವಹಿಸಿ ನಾಲ್ಕು ಮಾತ್ರೆಗಳನ್ನು ನೀಡಿದ್ದರೆ ಅಥವಾ ಶಾಲೆಯಲ್ಲಿ ವಿದ್ಯಾರ್ಥಿನಿಗೆ ಮಾತ್ರೆಗಳು ಸಿಕ್ಕಿದ್ದವೇ ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT