ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು: ಮೊಬೈಲ್‌ ಚಾರ್ಜ್‌ಗೆ ಹಾಕುವಾಗ ವಿದ್ಯುತ್‌ ಪ್ರವಹಿಸಿ ವಿದ್ಯಾರ್ಥಿ ಸಾವು

Published 6 ಜುಲೈ 2024, 15:57 IST
Last Updated 6 ಜುಲೈ 2024, 15:57 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ವೆಸ್ಟ್‌ ಆಫ್‌ ಕಾರ್ಡ್‌ ರಸ್ತೆಯ ಪಿಜಿಯೊಂದರಲ್ಲಿ ಶುಕ್ರವಾರ ರಾತ್ರಿ ಮೊಬೈಲ್‌ ಫೋನ್‌ ಚಾರ್ಜ್‌ಗೆ ಹಾಕುವಾಗ ವಿದ್ಯುತ್‌ ಪ್ರವಹಿಸಿ ವಿದ್ಯಾರ್ಥಿ ಶ್ರೀನಿವಾಸ್‌ (23) ಮೃತಪಟ್ಟಿದ್ದಾರೆ.

‘ಬೀದರ್‌ನ ಶ್ರೀನಿವಾಸ್‌ ಬಿಎಸ್ಸಿ ಪದವಿ ಪಡೆದಿದ್ದರು. ಕಂಪ್ಯೂಟರ್‌ ಕೋರ್ಸ್‌ ಮಾಡಲು ತಿಂಗಳ ಹಿಂದೆ ಬೆಂಗಳೂರಿಗೆ ಬಂದು ಪಿ.ಜಿಯಲ್ಲಿ ನೆಲೆಸಿದ್ದರು. ಶುಕ್ರವಾರ ರಾತ್ರಿ ಶೌಚಾಲಯದಿಂದ ಬಂದು ತೇವದ ಕೈಯಲ್ಲಿ ಮೊಬೈಲ್‌ ಫೋನ್ ಚಾರ್ಜ್‌ಗೆ ಹಾಕಲು ಮುಂದಾಗಿದ್ದಾರೆ. ಆಗ ವಿದ್ಯುತ್‌ ಪ್ರವಹಿಸಿದೆ. ಪ್ರಜ್ಞಾಹೀನವಾಗಿ ಬಿದ್ದಿದ್ದ ಶ್ರೀನಿವಾಸ್‌ ಅವರನ್ನು ಕಂಡ ಸ್ನೇಹಿತರು ಮುಟ್ಟಿ ಎಚ್ಚರಗೊಳಿಸಲು ಮುಂದಾಗಿದ್ದಾರೆ. ಆಗ ಅವರಿಗೂ ವಿದ್ಯುತ್‌ ಶಾಕ್‌ ಹೊಡೆದಿದೆ’ ಎಂದು ಪೊಲೀಸರು ಹೇಳಿದರು.

‘ವಿದ್ಯುತ್‌ ಪೂರೈಕೆ ಸ್ಥಗಿತಗೊಳಿಸಿ, ಶ್ರೀನಿವಾಸ್‌ನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರೀಕ್ಷಿಸಿದ ವೈದ್ಯರು ಅವರು ಮಾರ್ಗ ಮಧ್ಯೆಯೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದರು’ ಎಂದರು. 

ಬಸವೇಶ್ವರನಗರ ಪೊಲೀಸ್‌ ಠಾಣೆಯಲ್ಲಿ ಅಸಹಜ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT