ಬೆಂಗಳೂರು: ಸ್ನೇಹಿತನ ತಂಗಿಯನ್ನು ರೇಗಿಸುತ್ತಿರುವುದನ್ನು ಪ್ರಶ್ನಿಸಿದ ವಿದ್ಯಾರ್ಥಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದ ಘಟನೆ ಜಯನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬಿಟಿಎಂ ಲೇಔಟ್ನ ಸೋಮೇಶ್ವರ ನಿವಾಸಿ ಸಜೀತ್ (19) ಇರಿತಕ್ಕೊಳಗಾದ ವಿದ್ಯಾರ್ಥಿ. ಗಾಯಾಳು ಚೇತರಿಸಿಕೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದ ಹರಿ, ಪಟ್ಟಾಭಿ ಸೇರಿ ನಾಲ್ವರ ವಿರುದ್ಧ ದೂರು ದಾಖಲಾಗಿದ್ದು ಎಲ್ಲರೂ ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದರು.

ಸಜೀತ್, ನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿ.ಕಾಂ ಕಲಿಯುತ್ತಿದ್ದಾನೆ. ಅದೇ ಕಾಲೇಜಿನಲ್ಲಿ ಸಜೀತ್ ಸ್ನೇಹಿತ ಮತ್ತು ಆತನ ತಂಗಿ ಪಿಯುಸಿ ಓದುತ್ತಿದ್ದಾರೆ. ಸ್ನೇಹಿತನ ತಂಗಿಯನ್ನು ಅದೇ ಕಾಲೇಜಿನ ಮತ್ತೊಬ್ಬ ವಿದ್ಯಾರ್ಥಿ ನಿತ್ಯ ರೇಗಿಸುತ್ತಿರುವ ಬಗ್ಗೆ ಸ್ನೇಹಿತ ಹೇಳಿಕೊಂಡಿದ್ದ.

ಬಾಲಕಿಯನ್ನು ರೇಗಿಸುತ್ತಿದ್ದ ವಿದ್ಯಾರ್ಥಿಗೆ ಜ. 22ರಂದು ಸಜೀತ್ ಎಚ್ಚರಿಕೆ ನೀಡಿದ್ದ. ಇಷ್ಟಕ್ಕೆ ಆ ವಿದ್ಯಾರ್ಥಿ ತನ್ನ ಸ್ನೇಹಿತರನ್ನು ಕರೆಕೊಂಡು ಬಂದು ಸಜೀತ್, ಹೊಟ್ಟೆಗೆ ಇರಿದು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.