ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸ್‌ ಪಾಸ್‌ಗಳ ಅವಧಿ ವಿಸ್ತರಣೆ

Last Updated 31 ಆಗಸ್ಟ್ 2021, 23:14 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (ಬಿಎಂಟಿಸಿ) 2020–21ನೇ ಸಾಲಿನ ವಿದ್ಯಾರ್ಥಿ ಪಾಸ್‌ಗಳ ಮಾನ್ಯತೆಯ ಅವಧಿಯನ್ನು ಸೆಪ್ಟೆಂಬರ್‌ 30ರವರೆಗೆ ವಿಸ್ತರಿಸಿದೆ.

‘ಲಾಕ್‌ಡೌನ್‌ ತೆರವಾಗಿರುವ ಕಾರಣ ಹಲವು ಕಾಲೇಜುಗಳು ಭೌತಿಕ ತರಗತಿಗಳನ್ನು ಆರಂಭಿಸಿವೆ. ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ, ಪಿಎಚ್‌.ಡಿ, ವೈದ್ಯಕೀಯ ಹಾಗೂ ಸಂಜೆ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT