ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

Published 1 ಜನವರಿ 2024, 16:04 IST
Last Updated 1 ಜನವರಿ 2024, 16:04 IST
ಅಕ್ಷರ ಗಾತ್ರ

ಬೆಂಗಳೂರು: ಬಿಬಿಎ ವಿದ್ಯಾರ್ಥಿನಿಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸುಧಾಮನಗರದ ವರ್ಷಿಣಿ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈ ಸಂಬಂಧ ವಿಲ್ಸನ್‌ ಗಾರ್ಡನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ವರ್ಷಿಣಿ ನಗರದ ಕಾಲೇಜೊಂದರಲ್ಲಿ ಪ್ರಥಮ ವರ್ಷದ ಬಿಬಿಎ ವ್ಯಾಸಂಗ ಮಾಡುತ್ತಿದ್ದರು. ಶನಿವಾರ ರಾತ್ರಿ ಮನೆಯಲ್ಲಿ ಊಟ ಮುಗಿಸಿ, ತಮ್ಮ ಕೊಠಡಿಗೆ ತೆರಳಿದ್ದರು. ಭಾನುವಾರ ಬೆಳಿಗ್ಗೆ ಎಷ್ಟು ಹೊತ್ತಾದರೂ ಕೊಠಡಿಯಿಂದ ಹೊರಗೆ ಬಾರದಿದ್ದಾಗ ಅನುಮಾನಗೊಂಡು ಪೋಷಕರು ಬಾಗಿಲು ತಟ್ಟಿದ್ದಾರೆ. ಆಕೆಯಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಬಾಗಿಲು ಲಾಕ್‌ ತೆಗೆದು ಒಳಗೆ ಪರಿಶೀಲಿಸಿದಾಗ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿತ್ತು’ ಎಂದು ಪೊಲೀಸರು ಹೇಳಿದರು.

‘ಕೊಠಡಿಯಲ್ಲಿ ಯಾವುದೇ ಡೆತ್‌ನೋಟ್‌ ಸಿಕ್ಕಿಲ್ಲ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಲಾಗಿದೆ’ ಎಂದು ಪೊಲೀಸರು ಹೇಳಿದರು.

ವರ್ಷಿಣಿ ಫೋಟೊಗ್ರಫಿ ಕೋರ್ಸ್‌ ಮಾಡುತ್ತಿದ್ದರು. ಡಿ.30ರಂದು ಮಾಲ್‌ವೊಂದರಲ್ಲಿ ಫೋಟೊ ಶೂಟ್‌ ನಡೆಸಲು ಪೋಷಕರ ಅನುಮತಿ ಕೇಳಿದ್ದರು. ಇದಕ್ಕೆ ಪೋಷಕರು ನಿರಾಕರಿಸಿದ್ದರು. ಈ ವಿಚಾರದಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT