ಮಂಗಳವಾರ, ಸೆಪ್ಟೆಂಬರ್ 22, 2020
26 °C

ಸವಾಲು ಎದುರಿಸಲು ವಿದ್ಯಾರ್ಥಿಗಳು ಶಕ್ತರಾಗಬೇಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ವಿದ್ಯಾರ್ಥಿಗಳು ಪರೀಕ್ಷೆಯ ಜೊತೆಗೆ ಯಾವುದೇ ರೀತಿಯ ಸವಾಲನ್ನು ಎದುರಿಸುವ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ಇದಕ್ಕಾಗಿ ಉಪನ್ಯಾಸಕರು ವಿದ್ಯಾರ್ಥಿಗಳತ್ತ ಹೆಚ್ಚಿನ ಗಮನ ನೀಡಬೇಕು’ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಎನ್.ಚಂದ್ರಪ್ಪ ಕಿವಿಮಾತು ಹೇಳಿದರು.

ಯಲಹಂಕದ ಶನಿವಾರ ನಡೆದ ಆದಿತ್ಯ ನಿರ್ವಹಣೆ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆಯ (ಎಐಎಂಎಸ್‍ಆರ್) ಪದವಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಶೈಕ್ಷಣಿಕ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಪೈಪೋಟಿ ಹಾಗೂ ಪರೀಕ್ಷಾ ವ್ಯವಸ್ಥೆಗಳಲ್ಲಿ ಬದಲಾವಣೆಗಳಿಂದ ವಿದ್ಯಾರ್ಥಿಗಳು ಉದ್ಯೋಗ ಪಡೆಯಲು ಅಗತ್ಯ ಕೌಶಲಗಳನ್ನು  ಬೆಳೆಸಿಕೊಳ್ಳುವುದು ಮುಖ್ಯ’ ಎಂದರು.

ಆದಿತ್ಯ ಸಮೂಹ ಸಂಸ್ಥೆಗಳ ಅಧ್ಯಕ್ಷ ಬಿ.ಎ.ವಿಶ್ವನಾಥ್ ಮಾತನಾಡಿ, ‘ಉತ್ತಮ ಶಿಕ್ಷಣ ಪಡೆಯುವುದು ಹಾಗು ಜ್ಞಾನ ಹೆಚ್ಚಿಸಿಕೊಳ್ಳುವ ಹಸಿವು ವಿದ್ಯಾರ್ಥಿಗಳಲ್ಲಿ ಸದಾ ಇರಬೇಕು. ಅಂತಹ ವಿದ್ಯಾರ್ಥಿಗಳ ಭವಿಷ್ಯ ಉತ್ತಮವಾಗಿ ರೂಪುಗೊಳ್ಳುವುದು’ ಎಂದು ಹೇಳಿದರು.

ಬಿ.ಕಾಂ, ಬಿಬಿಎ, ಬಿಸಿಎ, ಎಂಬಿಎ ಸೇರಿ 350 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು