ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುರುತಿನ ಚೀಟಿ ತೋರಿಸಿದಲ್ಲಿ ಪ್ರಯಾಣಕ್ಕೆ ಅವಕಾಶ

Last Updated 13 ನವೆಂಬರ್ 2020, 23:09 IST
ಅಕ್ಷರ ಗಾತ್ರ

ಬೆಂಗಳೂರು: ಕಾಲೇಜುಗಳು ಪುನರಾರಂಭವಾದ ಬಳಿಕ ವಿದ್ಯಾರ್ಥಿಗಳು ಕಳೆದ ಸಾಲಿನಲ್ಲಿ ಪಡೆದ ಪಾಸು ಅಥವಾ ಪ್ರಸಕ್ತ ಸಾಲಿನಲ್ಲಿ ದಾಖಲಾಗಿರುವ ಪ್ರವೇಶ ಪತ್ರ, ಗುರುತಿನ ಚೀಟಿ ತೋರಿಸಿ, ವಾಸಸ್ಥಳದಿಂದ ಕಾಲೇಜಿಗೆ ಸಾಮಾನ್ಯ ಬಸ್‌ಗಳಲ್ಲಿ ಪ್ರಯಾಣಿಸಬಹುದು ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ತಿಳಿಸಿದೆ.

ಪದವಿ, ಸ್ನಾತಕೋತ್ತರ, ಡಿಪ್ಲೊಮಾ, ತಾಂತ್ರಿಕ ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ನ.17ರಿಂದ 2020–21ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಲಾಗುತ್ತಿದೆ. ಅಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗುತ್ತಿದೆ. ಪ್ರಸಕ್ತ ಸಾಲಿನ ವಿದ್ಯಾರ್ಥಿ ಪಾಸಿನ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT