ಶನಿವಾರ, ಅಕ್ಟೋಬರ್ 19, 2019
27 °C

ವಿದ್ಯಾರ್ಥಿನಿಲಯದಲ್ಲಿ ಅವ್ಯವಸ್ಥೆ; ಪ್ರತಿಭಟನೆ

Published:
Updated:

ಬೆಂಗಳೂರು: ಉಲ್ಲಾಳದಲ್ಲಿರುವ ಹಿಂದುಳಿದ ವರ್ಗಗಳ ಇಲಾಖೆಯ ವಿದ್ಯಾರ್ಥಿನಿಲಯದ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿಗಳು ಗುರುವಾರ ಪ್ರತಿಭಟನೆ ನಡೆಸಿದರು.

‘ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯದಲ್ಲಿ ನೂರು ವಿದ್ಯಾರ್ಥಿಗಳಿದ್ದಾರೆ. ಅವರಿಗೆ ಕೇವಲ 3 ಶೌಚಾಲಯಗಳಿವೆ. ಗ್ರಂಥಾಲಯ ಹಾಗೂ ಕಂಪ್ಯೂಟರ್‌ ಇಲ್ಲ. ಶುದ್ಧ ಕುಡಿಯುವ ನೀರು ಹಾಗೂ ಗುಣಮಟ್ಟದ ಆಹಾರ ಸಿಗುತ್ತಿಲ್ಲ. ತಿಗಣೆ ಕಾಟವೂ ಹೆಚ್ಚಾಗಿದೆ’ ಎಂದು ವಿದ್ಯಾರ್ಥಿಗಳು ದೂರಿದರು.

ಸ್ಥಳಕ್ಕೆ ಬಂದ ಅಧಿಕಾರಿಗಳು, ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದರು. ಇದೇ ವೇಳೆ ಮಾತಿನ ಚಕಮಕಿಯೂ ನಡೆಯಿತು. ‘ವಸತಿ ನಿಲಯವನ್ನು ಬೇರೆ ಕಟ್ಟಡಕ್ಕೆ ಸ್ಥಳಾಂತರಿಸಬೇಕು’ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದರು.

ವಿದ್ಯಾರ್ಥಿಗಳು ಪ್ರತ್ಯೇಕವಾಗಿ ಚೀಟಿಯಲ್ಲಿ ಅಭಿಪ್ರಾಯ ಬರೆದು ಕೊಡುವಂತೆ ಆಗ ಅಧಿಕಾರಿಗಳು, ಸೂಚಿಸಿದರು. ಬಹುಪಾಲು ವಿದ್ಯಾರ್ಥಿಗಳು, ಸ್ಥಳಾಂತರಕ್ಕೆ ಬೆಂಬಲ ವ್ಯಕ್ತಪಡಿಸಿದರು. ಸೂಕ್ತ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈಬಿಟ್ಟರು.

Post Comments (+)