ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಚ್ಛತಾ ಅಭಿಯಾನದಲ್ಲಿ ನೀರಿನಿಂದ ಪಿಒಪಿ ವಿಗ್ರಹ ಹೊರತೆಗೆದ ವಿದ್ಯಾರ್ಥಿಗಳು

Published 1 ಅಕ್ಟೋಬರ್ 2023, 16:21 IST
Last Updated 1 ಅಕ್ಟೋಬರ್ 2023, 16:21 IST
ಅಕ್ಷರ ಗಾತ್ರ

ಬೆಂಗಳೂರು: ಗಾಂಧಿ ಜಯಂತಿ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛತಾ ಅಭಿಯಾನದಲ್ಲಿ ಬೇಗೂರು ಕೆರೆಯಲ್ಲಿ ವಿಸರ್ಜಿಸಿದ್ದ ಗಣೇಶನ ಪಿಒಪಿ ಮೂರ್ತಿಗಳನ್ನು ಹೊರತೆಗೆಯಲಾಯಿತು.

ಭಾನುವಾರ ಬಿಬಿಎಂಪಿ ವ್ಯಾಪ್ತಿಯ ಎಲ್ಲ ವಾರ್ಡ್‌ಗಳಲ್ಲಿ ‘ಸ್ವಚ್ಛತೆಗಾಗಿ ಒಂದು ಗಂಟೆ ಶ್ರಮದಾನ’ ಎಂಬ ಘೋಷಣೆಯಡಿ, ಸ್ಥಳೀಯ ನಿವಾಸಿಗಳೊಂದಿಗೆ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ಕೋರಮಂಗಲದ ಸೇಂಟ್ ಫ್ರಾನ್ಸಿಸ್ ಕಾಲೇಜಿನ ಎನ್ಎಸ್ಎಸ್ ಘಟಕದ ವಿದ್ಯಾರ್ಥಿಗಳು ಬೇಗೂರು ಕೆರೆ ಸ್ವಚ್ಛತೆಯಲ್ಲಿ ಕೈಜೋಡಿಸಿದ್ದರು. ಕೆರೆಯಲ್ಲಿ ಭಾರಿ ಗಾತ್ರದ ಪಿಒಪಿ ಗಣೇಶ ಮೂರ್ತಿಗಳನ್ನು ಕಂಡ ವಿದ್ಯಾರ್ಥಿಗಳು ಕೆರೆಯಲ್ಲಿ ಇಳಿದು ಹೊರ ತೆಗೆದರು.

‘ಪಿಒಪಿ ಮೂರ್ತಿಗಳ ವಿಸರ್ಜನೆಯನ್ನು ಸರ್ಕಾರ ನಿರ್ಬಂಧಿಸಿದ್ದರೂ ಇಷ್ಟು ದೊಡ್ಡ ಮೂರ್ತಿಗಳನ್ನು ವಿಸರ್ಜಿಸಿರುವುದು ಸರಿಯಲ್ಲ. ನಮ್ಮ ಜನಕ್ಕೆ ಪರಿಸರ ಕಾಳಜಿ ಇಲ್ಲದಿರುವುದು ಬೇಸರ ತರಿಸಿದೆ’ ಎಂದು ಶ್ರಮದಾನದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು ಅಭಿಪ್ರಾಯಪಟ್ಟರು.

ಹೊಂಗಸಂದ್ರದಲ್ಲಿ ನಡೆದ ಅಭಿಯಾನದಲ್ಲಿ ಶಾಸಕ ಸತೀಶ್ ರೆಡ್ಡಿ ಪೊರಕೆ ಹಿಡಿದು ರಸ್ತೆ ಸ್ವಚ್ಛತೆಯಲ್ಲಿ ಪಾಲ್ಗೊಂಡರು. ಬಿಬಿಎಂಪಿ ಬೊಮ್ಮನಹಳ್ಳಿ ವಲಯ ಜಂಟಿ ಆಯುಕ್ತ ಅಜಿತ್, ಕಾರ್ಯಪಾಲಕ ಎಂಜಿನಿಯರ್ ಪಾಪರೆಡ್ಡಿ, ಪಾಲಿಕೆ ಮಾಜಿ ಸದಸ್ಯರಾದ ಎಂ. ಆಂಜನಪ್ಪ, ಭಾರತಿ ರಾಮಚಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT