ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ಕೃಷಿ ವಿವಿ: ಜಂಟಿ ಪದವಿಗೆ ಅವಕಾಶ

Published 26 ಮೇ 2024, 0:14 IST
Last Updated 26 ಮೇ 2024, 0:14 IST
ಅಕ್ಷರ ಗಾತ್ರ

ಬೆಂಗಳೂರು: ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ಪಡೆಯಲು ಕೇಂದ್ರ ಸರ್ಕಾರವು ಆಯ್ಕೆ ಮಾಡಿರುವ ವಿಶ್ವವಿದ್ಯಾಲಯಗಳಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯವೂ ಸೇರಿದೆ.

ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದ ಉನ್ನತ ಶಿಕ್ಷಣ ಇಲಾಖೆಯಡಿಯಲ್ಲಿ ಭಾರತೀಯ ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ವಿದೇಶಿ ಉನ್ನತ ಶಿಕ್ಷಣ ಸಂಸ್ಥೆಗಳ ನಡುವೆ ಶೈಕ್ಷಣಿಕ ಸಹಯೋಗ ಬೆಳೆಸುವ ನಿಟ್ಟಿನಲ್ಲಿ ಜಂಟಿ ಪದವಿ, ಅವಳಿ ಪದವಿ, ಉಭಯ ಪದವಿಗಳನ್ನು ನೀಡಲು ಒಪ್ಪಂದ ಮಾಡಿಕೊಳ್ಳಲಾಗಿದೆ. ದೇಶದ 234 ಸರ್ಕಾರಿ, ಖಾಸಗಿ ಮತ್ತು ಡೀಮ್ಡ್‌ ವಿಶ್ವವಿದ್ಯಾಲಯಗಳನ್ನು ಗುರುತಿಸಲಾಗಿದೆ. ಅದರಲ್ಲಿ ಕರ್ನಾಟಕದ 12 ಖಾಸಗಿ ವಿಶ್ವವಿದ್ಯಾಲಯಗಳು ಮತ್ತು 9 ಸರ್ಕಾರಿ ವಿಶ್ವವಿದ್ಯಾಯಗಳು ಒಳಗೊಂಡಿದೆ.

ದೇಶದಲ್ಲಿ 4 ಕೃಷಿ ವಿಶ್ವವಿದ್ಯಾಲಯಗಳಷ್ಟೇ ಈ ಪಟ್ಟಿಯಲ್ಲಿದ್ದು, ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಅದರಲ್ಲಿ ಒಂದಾಗಿದೆ. 

ವಿದ್ಯಾರ್ಥಿಗಳು ಕಲಿಕೆಯ ಅರ್ಧಭಾಗವನ್ನು ಭಾರತದಲ್ಲಿ, ಅರ್ಧಭಾಗವನ್ನು ವಿದೇಶದಲ್ಲಿ ಪೂರ್ಣಗೊಳಿಸಬಹುದು. ಒಂದೇ ವಿಷಯದಲ್ಲಿ ವಿದೇಶಿ, ಭಾರತದ ವಿವಿಗಳು ಜಂಟಿಯಾಗಿ ಅಥವಾ ಪ್ರತ್ಯೇಕವಾಗಿ ಪದವಿ ಪ್ರಮಾಣಪತ್ರ ನೀಡಬಹುದು. ಭಾರತದಲ್ಲೇ ಪ್ರವೇಶ ಪಡೆದು ವಿದೇಶದಲ್ಲಿ ಕಲಿಯುವ ಅವಕಾಶ ದೊರೆಯುತ್ತದೆ. ಇದರಿಂದ ಅಂತರರಾಷ್ಟ್ರೀಯ ಗುಣಮಟ್ಟದ ಶಿಕ್ಷಣ ಪಡೆಯಲು ಸಹಕಾರಿಯಾಗುತ್ತದೆ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT