ಶುಕ್ರವಾರ, ಜುಲೈ 1, 2022
22 °C

ಬಾಡಿವೊರ್ನ್‌ ಕ್ಯಾಮೆರಾ: ಮಾಹಿತಿಗೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಕಾಲಾವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಬಳಸಬಹುದಾದ ’ಬಾಡಿವೋರ್ನ್‌ ಕ್ಯಾಮೆರಾ’ ಖರೀದಿಗಾಗಿ ಹೊರಡಿಸಿರುವ ಕಾರ್ಯಾದೇಶ ಹಾಗೂ ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌, ಒಂದು ವಾರದ ಕಾಲಾವಕಾಶ ನೀಡಿದೆ.

ಈ ಕುರಿತಂತೆ ಹೈಕೋರ್ಟ್‌ ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ’ತಾಂತ್ರಿಕ ಸಮಸ್ಯೆಯಿಂದ ಇ-ಫೈಲಿಂಗ್ ಮಾಡಲು ಸಾಧ್ಯವಾಗಿಲ್ಲ. ಒಂದು ವಾರ ಕಾಲಾವಕಾಶ ನೀಡಿದರೆ ನ್ಯಾಯಾಲಯಕ್ಕೆ ಎಲ್ಲ ಅಗತ್ಯ ದಾಖಲೆ ಸಲ್ಲಿಸಲಾಗುವುದು‘ ಎಂದು ಮನವಿ ಮಾಡಿದರು. ಇದನ್ನು ಪುರಸ್ಕರಿಸಿದ ನ್ಯಾಯಪೀಠ ವಿಚಾರಣೆಯನ್ನು ಫೆಬ್ರುವರಿ 7ಕ್ಕೆ ಮುಂದೂಡಿದೆ.

ಏನಿದು ಅರ್ಜಿ?: ’ಬಾಡಿವೋರ್ನ್‌ ಕ್ಯಾಮೆರಾ ಧರಿಸುವುದರಿಂದ ಪೊಲೀಸರಿಗೆ ರಕ್ಷಣೆ ಸಿಗಲಿದೆ. ಸಿಬ್ಬಂದಿಯ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬಹುದು ಮತ್ತು ಅವರ ಕರ್ತವ್ಯ ನಿರ್ವಹಣೆಯನ್ನು ಹಿರಿಯ ಅಧಿಕಾರಿಗಳು ಠಾಣೆಯಿಂದಲೇ ಮೇಲ್ವಿಚಾರಣೆ ನಡೆಸಬಹುದು. ಆದ್ದರಿಂದ, ಹೆಚ್ಚಿನ ಪ್ರಮಾಣದಲ್ಲಿ ಬಾಡಿವೋರ್ನ್‌ ಕ್ಯಾಮೆರಾ ಖರೀದಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು‘ ಎಂಬುದು ಅರ್ಜಿದಾರರ ಕೋರಿಕೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು