ಬೆಂಗಳೂರು: ಸುಬ್ರಹ್ಮಣ್ಯನಗರ ಠಾಣೆ ವ್ಯಾಪ್ತಿಯಲ್ಲಿ ಮಂಜುಳಾ (40) ಎಂಬುವರನ್ನು ಕತ್ತು ಕೊಯ್ದು ಕೊಲೆ ಮಾಡಲಾಗಿದ್ದು, ಪರಿಚಯಸ್ಥರೇ ಕೃತ್ಯ ಎಸಗಿರುವ ಅನುಮಾನ ವ್ಯಕ್ತವಾಗಿದೆ.

‘ಪತಿಯಿಂದ ದೂರವಾಗಿದ್ದ ಮಂಜುಳಾ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. 19 ವರ್ಷದ ಮಗನ ಜೊತೆ ಗಾಯತ್ರಿನಗರದ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಅದೇ ಮನೆಯಲ್ಲೇ ಕೊಲೆ ಆಗಿದೆ’ ಎಂದು ಸುಬ್ರಹ್ಮಣ್ಯನಗರ ಪೊಲೀಸರು ಹೇಳಿದರು.

‘ಶನಿವಾರ ಬೆಳಿಗ್ಗೆಯೇ ಮಂಜುಳಾ ಅವರನ್ನು ಕೊಲೆ ಮಾಡಿರುವ ಶಂಕೆ ಇದೆ. ಸಂಜೆಯಾದರೂ ಅವರು ಹೊರಗೆ ಬಾರದಿದ್ದರಿಂದ ಅನುಮಾನಗೊಂಡ ಸ್ಥಳೀಯರು ಮನೆಯಲ್ಲಿ ನೋಡಿದಾಗ ವಿಷಯ ಗೊತ್ತಾಗಿತ್ತು. ಸ್ಥಳೀಯರೇ ಠಾಣೆಗೆ ಮಾಹಿತಿ ನೀಡಿದ್ದರು’ ಎಂದು ತಿಳಿಸಿದರು.

‘ಮಂಜುಳಾ ಅವರ ಮೈ ಮೇಲಿದ್ದ ಆಭರಣ ಹಾಗೂ ಮನೆಯಲ್ಲಿದ್ದ ಯಾವುದೇ ವಸ್ತು ಕಳ್ಳತನವಾಗಿಲ್ಲ. ಮನೆಯ ಸುತ್ತಮುತ್ತಲ ಸಿ.ಸಿ.ಟಿ.ವಿ ಕ್ಯಾಮೆರಾ ಪರಿಶೀಲನೆ ನಡೆಸಲಾಗುತ್ತಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.