ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪನಗರ ರೈಲು: ಜೂ.20ಕ್ಕೆ ಪ್ರಧಾನಿ ಮೋದಿಯಿಂದ ಶಂಕುಸ್ಥಾಪನೆ

Last Updated 6 ಜೂನ್ 2022, 20:36 IST
ಅಕ್ಷರ ಗಾತ್ರ

ಬೆಂಗಳೂರು: ಉಪನಗರ ರೈಲು ಯೋಜನೆಗೆ ಅನುಮೋದನೆ ದೊರೆತು 607 ದಿನಗಳ ಬಳಿಕ ಕೊನೆಗೂ ಶಂಕುಸ್ಥಾಪನೆಗೆ ಕಾಲ ಕೂಡಿಬಂದಿದೆ. ಜೂನ್ 20ರಂದು ಪ್ರಧಾನಿ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸುವರು.

ಮುಂಬೈ ಮಾದರಿಯಲ್ಲಿ ನಗರಕ್ಕೆ ಪ್ರತ್ಯೇಕವಾಗಿ ರೈಲು ಸೇವೆ ಆರಂಭಿಸುವ ಬಗ್ಗೆ ರೈಲ್ವೆ ಇಲಾಖೆ 1983ರಲ್ಲೇ ಪ್ರಸ್ತಾಪ ಸಿದ್ಧಪಡಿಸಿತ್ತು. 2019ರ ಕೇಂದ್ರ ಬಜೆಟ್‌ನಲ್ಲಿ ಈ ಯೋಜನೆಯನ್ನು ಉಲ್ಲೇಖಿಸಲಾಯಿತು. 2020ರ ಅ. 21ರಂದು ರೈಲ್ವೆ ಮಂಡಳಿಯಿಂದ ಇದಕ್ಕೆ ಅನುಮೋದನೆಯೂ ದೊರೆಯಿತು. ಅನುಮೋದನೆದೊರೆತು ಎರಡು ವರ್ಷಗಳುಸಮೀಪಿಸುತ್ತಿದ್ದರೂ ಕಾಮಗಾರಿ ಆರಂಭವೇ ಆಗಲಿಲ್ಲ.

‌ಯೋಜನೆ ಅನುಷ್ಠಾನದ ಹೊಣೆ ಹೊತ್ತಿರುವ ಕರ್ನಾಟಕ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ನಿಗಮ( ಕೆ–ರೈಡ್) ಈ ಯೋಜನೆಯನ್ನು ನಾಲ್ಕು ಕಾರಿಡಾರ್‌ಗಳನ್ನಾಗಿ ವಿಂಗಡಿಸಿದೆ. ‌2,190 ದಿನಗಳ (6 ವರ್ಷ) ಕಾಲಮಿತಿ ನಿಗದಿ ಮಾಡಿಕೊಂಡಿದೆ. ಅದರಲ್ಲಿ ಈಗ ಶೇ 25ರಷ್ಟು ದಿನಗಳು ಪೂರ್ಣಗೊಂಡಿವೆ.

ಪ್ರಧಾನಿ ನರೇಂದ್ರ ಮೋದಿ ಅವರಿಂದಲೇ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿಸಲು ರಾಜ್ಯ ಸರ್ಕಾರ ಕಾಯುತ್ತಿತ್ತು. ಜೂನ್ 20ರಂದು ನಗರಕ್ಕೆ ಬರಲಿರುವ ನರೇಂದ್ರ ಮೋದಿ ಅವರಿಂದ ಕಾಮಗಾರಿಗೆ ಚಾಲನೆ ಕೊಡಿಸಲು ನಿರ್ಧರಿಸಿದೆ.

‘₹15 ಸಾವಿರ ಕೋಟಿ ಮೊತ್ತದ ಉಪನಗರ ರೈಲು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ. ಇದು ನಗರದ ಸಂಚಾರ ದಟ್ಟಣೆಯ ಸಮಸ್ಯೆ ನೀಗಿಸಲಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT