ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಸೋಂಕಿತ 100ನೇ ಗರ್ಭಿಣಿಗೆ ಯಶಸ್ವಿ ಹೆರಿಗೆ

ವಾಣಿ ವಿಲಾಸ ಆಸ್ಪತ್ರೆಯ ವೈದ್ಯರ ಕಾರ್ಯಕ್ಕೆ ಮೆಚ್ಚುಗೆ
Last Updated 17 ಜುಲೈ 2020, 21:00 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ವಾಣಿ ವಿಲಾಸ ಆಸ್ಪತ್ರೆಯ ವೈದ್ಯರು ಕೊರೊನಾ ಸೋಂಕಿತ 100 ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ. ವೈದ್ಯರ ಈ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಗುರುವಾರ ಮಧ್ಯರಾತ್ರಿ 3 ಗಂಟೆಗೆ ಕೊರೊನಾ ಸೋಂಕಿತ ಮಹಿಳೆಯ ಹೆರಿಗೆ ಮಾಡಿಸಿದ್ದು, ಹೆಣ್ಣು ಮಗು ಜನಿಸಿದೆ. ಇದು ಆಸ್ಪತ್ರೆಯಲ್ಲಿ ನಡೆಸಿದ ನೂರನೇ ಹೆರಿಗೆಯಾದ್ದರಿಂದ ವೈದ್ಯರು ಪರಸ್ಪರ ಶುಭಹಾರೈಸಿ, ಸಂಭ್ರಮಿಸಿದರು. ಕೊರೊನಾ ಸೋಂಕಿತ 150 ಗರ್ಭಿಣಿಯರು ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈವರೆಗೆ ನಡೆಸಿದ ಹೆರಿಗೆಗಳಲ್ಲಿ 76 ಶಿಶುಗಳನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆಯಲಾಗಿದೆ. ವಾಣಿ ವಿಲಾಸ ಆಸ್ಪತ್ರೆಯ ಪಕ್ಕದಲ್ಲೇ ಇರುವ ಟ್ರಾಮಾ ಕೇರ್ ಸೆಂಟರ್‌ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆಯಾಗಿದ್ದು, ಅಲ್ಲಿ ಕೂಡ ಪ್ರಮುಖ ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಗುತ್ತಿದೆ.

‘ವಾರದ ಏಳು ದಿನಗಳು ಕಾರ್ಯನಿರ್ವಹಿಸುತ್ತಿದ್ದೇವೆ. ಬಳಿಕ ಐದು ದಿನಗಳು ಕ್ವಾರಂಟೈನ್‌ಗೆ ಒಳಗಾಗಿ ಸೇವೆಗೆ ವಾಪಸ್ ಆಗುತ್ತಿದ್ದೇವೆ. ದಿನದ ಎಲ್ಲ ಸಮಯದಲ್ಲಿಯೂ ವೈಯಕ್ತಿಕ ಸುರಕ್ಷತಾ ಸಾಧನ (ಪಿಪಿಇ ಕಿಟ್) ಧರಿಸಿರಬೇಕಾಗುತ್ತದೆ. ರಾಜ್ಯದಲ್ಲಿ ಪ್ರಥಮ ಕೋವಿಡ್ ಪ್ರಕರಣ ವರದಿಯಾದಾಗಿನಿಂದಲೂ ನಿರಂತರವಾಗಿ ಸೇವೆ ಸಲ್ಲಿಸುತ್ತಿದ್ದೇವೆ’ ಎಂದುಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕಿ ಡಾ.ಜಿ.ಎಸ್. ಅನಿತಾ ತಿಳಿಸಿದರು.

ಮೈಲಿಗಲ್ಲು ಸ್ಥಾಪನೆ: ವಾಣಿ ವಿಲಾಸ ಆಸ್ಪತ್ರೆಯ ವೈದ್ಯರ ಕಾರ್ಯಕ್ಕೆ ಅಭಿನಂದನೆ ಸಲ್ಲಿಸಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ‘ಕೋವಿಡ್ ಸೋಂಕಿತ 100ನೇ ಗರ್ಭಿಣಿಗೆ ಯಶಸ್ವಿಯಾಗಿ ಹೆರಿಗೆ ನೆರವೇರಿಸುವ ಮೂಲಕ ಆಸ್ಪತ್ರೆ ಇನ್ನೊಂದು ವಿಶೇಷ ಮೈಲುಗಲ್ಲು ಸಾಧಿಸಿದೆ. ಇದಕ್ಕೆ ಶ್ರಮಿಸಿದ ಎಲ್ಲಾ ವೈದ್ಯರು ಮತ್ತು ಸಿಬ್ಬಂದಿಗೆ ಅಭಿನಂದನೆಗಳು’ ಎಂದು ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT