ಸೋಮವಾರ, ನವೆಂಬರ್ 18, 2019
25 °C

6ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

Published:
Updated:

ಬೆಂಗಳೂರು: ಶಾಲೆಗೆ ಹೋಗುವಂತೆ ತಾಯಿ ಬುದ್ದಿಮಾತು ಹೇಳಿದ್ದಕ್ಕೆ ನೊಂದ 6ನೇ ತರಗತಿ ವಿದ್ಯಾರ್ಥಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಲಗ್ಗೆರೆಯಲ್ಲಿ ನಡೆದಿದೆ.

ರಾಹುಲ್ (11) ಆತ್ಮಹತ್ಯೆ ಮಾಡಿಕೊಂಡ ಬಾಲಕ. ರಾಹುಲ್‌ನ ತಾಯಿ ಸಿದ್ಧ ಉಡುಪು ತಯಾರಿಕಾ ಘಟಕದಲ್ಲಿ ಕೆಲಸ ಮಾಡುತ್ತಿದ್ದರೆ, ತಂದೆ ಚಾಲಕರಾಗಿದ್ದರು. ಮನೆ ಸಮೀಪದ ಖಾಸಗಿ ಶಾಲೆಯಲ್ಲಿ ಕಲಿಯುತ್ತಿದ್ದ ರಾಹುಲ್‍ಗೆ ಓದಿನಲ್ಲಿ ಆಸಕ್ತಿ ಇರಲಿಲ್ಲ ಎನ್ನಲಾಗಿದೆ.

ಗುರುವಾರ ಬೆಳಿಗ್ಗೆ ಶಾಲೆಗೆ ಹೋಗುವಂತೆ ತಾಯಿ ಹೇಳಿದರೂ ರಾಹುಲ್‌ ಹೋಗಿರಲಿಲ್ಲ. ಇದರಿಂದ ಆಕ್ರೋಶಗೊಂಡ ತಾಯಿ, ರಾಹುಲ್‍ಗೆ ಬುದ್ದಿ ಹೇಳಿ ಕೆಲಸಕ್ಕೆ ಹೋಗಿದ್ದರು.

ಬೆಳಿಗ್ಗೆ 11 ಗಂಟೆಗೆ ಮನೆಯಲ್ಲಿ ಯಾರೂ ಇಲ್ಲದಿದ್ದ ಸಮಯದಲ್ಲಿ ರಾಹುಲ್‌ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದರು. ರಾಜಗೋಪಾಲ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತಿಕ್ರಿಯಿಸಿ (+)