ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಕ್‌ಡೌನ್ ನಂತರದ ಸವಾಲು: ಸಚಿವ ಸುಧಾಕರ್ ವಿಡಿಯೊ ಸಂವಾದ

Last Updated 3 ಮೇ 2020, 20:47 IST
ಅಕ್ಷರ ಗಾತ್ರ

ಬೆಂಗಳೂರು: ಲಾಕ್‍ಡೌನ್ ತೆರವಿನ ಬಳಿಕ ಕಾಣಿಸಿಕೊಳ್ಳುವ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಿರುವ ಮಾರ್ಗೋಪಾಯಗಳ ಬಗ್ಗೆ ನಾನಾ ಕ್ಷೇತ್ರಗಳ ಗಣ್ಯರ ಜತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಶನಿವಾರ ಸಮಾಲೋಚನೆ ಆರಂಭಿಸಿದರು.

ಮೊದಲ ಹಂತದಲ್ಲಿ ಸಚಿವರು ಕನ್ನಡ ಚಿತ್ರರಂಗ ಹಾಗೂ ಕ್ರೀಡಾಲೋಕದ ದಿಗ್ಗಜರ ಜತೆ ಶನಿವಾರ ವಿಡಿಯೊ ಸಂವಾದ ನಡೆಸಿದರು. ಕೊರೊನಾ ವೈರಾಣು ಜತೆಗೆ ಮುಂಬರುವ ದಿನಗಳಲ್ಲಿ ಬದುಕು ನಡೆಸುವ ಅನಿವಾರ್ಯ ಎದುರಾಗಿರುವ ಹಿನ್ನೆಲೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸಲು ಅನುಸರಿಸಬೇಕಿರುವ ಕ್ರಮಗಳ ಬಗ್ಗೆ ಚರ್ಚಿಸಿದರು.

ಚಿತ್ರನಟಿ ಮತ್ತು ಮಂಡ್ಯ ಸಂಸದೆ ಸುಮಲತಾ ಅಂಬರೀಷ್, ಸಂಗೀತ ನಿರ್ದೇಶಕರಾದ ಗುರುಕಿರಣ್, ಅರ್ಜುನ್ ಜನ್ಯ, ವಾಸುಕಿ ವೈಭವ್, ಸಿನಿಮಾ ನಟರಾದ ರವಿಚಂದ್ರನ್, ಪುನೀತ್ ರಾಜ್‍ಕುಮಾರ್, ಉಪೇಂದ್ರ, ರವಿಶಂಕರ್, ನೆನಪಿರಲಿ ಪ್ರೇಮ್, ಅಭಿಷೇಕ್ ಅಂಬರೀಷ್, ನಟಿಯರಾದ ತಾರಾ, ಶ್ರುತಿ, ರಾಗಿಣಿ ದ್ವಿವೇದಿ,ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್, ಕ್ರಿಕೆಟಿಗ ಅನಿಲ್‍ ಕುಂಬ್ಳೆ, ಬಿಲಿಯರ್ಡ್ಸ್‌ ಆಟಗಾರ ಪಂಕಜ್ ಅಡ್ವಾಣಿ ಸಲಹೆಗಳನ್ನು ನೀಡಿದರು. ದರ್ಶನ್, ಯಶ್, ಸುದೀಪ್ ಜತೆಗೂ ಸಂಜೆ ಸಮಾಲೋಚಿಸಿದರು.

ಸರ್ಕಾರ ಇದುವರೆಗೆ ಕೈಗೊಂಡಿ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಗಣ್ಯರು, ‘ಜನತೆಯ ಸುರಕ್ಷತೆಗೆ ಆದ್ಯತೆ ನೀಡಬೇಕು. ದೈನಂದಿನ ಚಟುವಟಿಕೆಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು’ ಸಲಹೆ ನೀಡಿದರು. ಕೋವಿಡ್ - 19 ಜಾಗೃತಿಗಾಗಿ ಸರ್ಕಾರ ಕೈಗೊಳ್ಳುವ ಕಾರ್ಯಗಳಲ್ಲಿ ಕೈಜೋಡಿಸುವುದಾಗಿ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT