ಗುರುವಾರ , ಮಾರ್ಚ್ 23, 2023
29 °C

ಸುಧೀಂದ್ರ ಹಾಲ್ದೊಡ್ಡೇರಿ ಸ್ಥಿತಿ ಗಂಭೀರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ವಿಜ್ಞಾನ ಬರಹಗಾರ, ಡಿಆರ್‌ಡಿಒ ಮಾಜಿ ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ ಅವರಿಗೆ ತೀವ್ರ ಹೃದಯಾಘಾತವಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸುಧೀಂದ್ರ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದರಾದರೂ, ಮಿದುಳಿಗೆ ಆಮ್ಲಜನಕ ಸರಬರಾಜು ಆಗುವುದು ನಿಂತಿರುವುದರಿಂದ ಅವರ ಮಿದುಳು ನಿಷ್ಕ್ರಿಯವಾಗುವ ಹಂತಕ್ಕೆ ತಲುಪಿದೆ ಎಂದು ಮೂಲಗಳು ಹೇಳಿವೆ.

ತಜ್ಞ ವೈದ್ಯರ ತಂಡ ಚಿಕಿತ್ಸೆ ಮುಂದುವರಿಸಿದೆ. ‘ಅವರಿಗೆ ಕೊರೊನಾ ಸೋಂಕು ತಗುಲಿಲ್ಲ. ಆದರೆ, ಚೇತರಿಸಿಕೊಳ್ಳುವುದು ಕಷ್ಟವಾಗಿದೆ. ಪ್ರಯತ್ನ ಮುಂದುವರಿಸಿದ್ದೇವೆ’ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.