ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಟ್ಪಾ ಕಾಯ್ದೆ ಅನುಷ್ಠಾನಕ್ಕೆ ಸಲಹೆ: ರಾಘವೇಂದ್ರ ಶೆಟ್ಟಿಗಾರ್

Published 19 ಡಿಸೆಂಬರ್ 2023, 16:14 IST
Last Updated 19 ಡಿಸೆಂಬರ್ 2023, 16:14 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಮಕ್ಕಳು, ಮಹಿಳೆಯರು ಮತ್ತು ಸಾರ್ವಜನಿಕರ ಆರೋಗ್ಯ ಕಾಪಾಡಲು ಕೋಟ್ಪಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ರಾಜ್ಯ ಕಾನೂನು ಸೇವಾ ಮಂಡಳಿ ಉಪಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್ ತಿಳಿಸಿದರು.

ಬಿಬಿಎಂಪಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಆಯೋಜಿಸಿದ್ದ ‘ಕೋಟ್ಪಾ 2003 ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಜಾರಿದಳ’– ತರಬೇತಿ ಕಾರ್ಯಗಾರದಲ್ಲಿ ಅವರು ಮಾತನಾಡಿದರು.

ನಗರದಲ್ಲಿ ಕೋಟ್ಪಾ ಕಾಯ್ದೆ ಬಗ್ಗೆ ನಾಗರಿಕರಲ್ಲಿ ಅರಿವು ಮೂಡಿಸಿ, ಕಾಯ್ದೆ ಉಲ್ಲಂಘಿಸುವವರ ವಿರುದ್ದ ದಂಡ ವಿಧಿಸಿ ಹಾಗೂ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.

ಹಿರಿಯ ಪೋಲಿಸ್ ಅಧಿಕಾರಿ ಬದ್ರಿನಾಥ್ ಮಾತನಾಡಿ, ರಸ್ತೆ ಬದಿಯ ಸಣ್ಣ ಅಂಗಡಿಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದರ ಮೇಲೆ ನಿಗಾವಹಿಸಿ ತಡೆಯಬೇಕು. ಹುಕ್ಕಾಬಾರ್, ಬಾರ್ ಮತ್ತು ರೆಸ್ಟೊರೆಂಟ್‌, ತಂಬಾಕು ಉತ್ಪನ್ನ ಮಾರಾಟಗಾರರು ಸೇರಿದಂತೆ ಕಾಯ್ದೆ ಉಲ್ಲಂಘಿಸಿರುವವರ ಮೇಲೆ  ಕ್ರಮ ಜರುಗಿಸಬೇಕು ಎಂದು ತಿಳಿಸಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಕಾರ್ಯಕ್ರಮ ಅಧಿಕಾರಿ ಡಾ. ಕುಮಾರ್‌ ಮಾತನಾಡಿ, ಶಾಲಾ-ಕಾಲೇಜು ಪಕ್ಕದಲ್ಲಿ ತಂಬಾಕು ಮಾರಾಟ ಮಾಡದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಕಾಯ್ದೆ ಉಲ್ಲಂಘನೆ ಮಾಡುವ ಕಡೆ ಪಾಲಿಕೆ ಆರೋಗ್ಯಾಧಿಕಾರಿಗಳು ಪೊಲೀಸ್ ಸಹಯೋಗದೊಂದಿಗೆ ಭೇಟಿ ನೀಡಿ ತಪಾಸಣೆ ನಡೆಸಿ ದಂಡ ವಿಧಿಸಲಾಗುವುದೆಂದು ತಿಳಿಸಿದರು.

ಬಿಬಿಎಂಪಿ ದಕ್ಷಿಣ ವಲಯ ಆರೋಗ್ಯಾಧಿಕಾರಿ ಡಾ. ಕಲ್ಪನಾ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT