ಶನಿವಾರ, ಸೆಪ್ಟೆಂಬರ್ 18, 2021
26 °C

ಅಕ್ಕನ ಮನೆಯಲ್ಲಿ ತಮ್ಮ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜರಾಜೇಶ್ವರಿನಗರ ಠಾಣೆ ವ್ಯಾಪ್ತಿಯಲ್ಲಿ ಸಿದ್ದರಾಮ (33) ಎಂಬುವರು ನೇಣು ಹಾಕಿಕೊಂಡು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಮಂಡ್ಯ ಜಿಲ್ಲೆಯ ಮದ್ದೂರಿನ ಸಿದ್ದರಾಮ, ನಗರದಲ್ಲಿ ಬಡಗಿ ಕೆಲಸ ಮಾಡುತ್ತಿದ್ದರು. ರಾಜರಾಜೇಶ್ವರಿನಗರದಲ್ಲಿರುವ ಅಕ್ಕನ ಮನೆಯಲ್ಲಿ ವಾಸವಿದ್ದರು. ಅದೇ ಮನೆಯ ಕೊಠಡಿಯಲ್ಲಿ ಅವರು ಆತ್ಮಹತ್ಯೆಗೆ ಶರಣಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಸಂಬಂಧಿ ಯುವತಿಯೊಬ್ಬರನ್ನು ಸಿದ್ದರಾಮ ಪ್ರೀತಿಸುತ್ತಿದ್ದರು. ಇತ್ತೀಚೆಗೆ ಪ್ರೀತಿಯಲ್ಲಿ ಮನಸ್ತಾಪವಾಗಿದ್ದರಿಂದ ಅವರು ಮಾನಸಿಕವಾಗಿ ನೊಂದಿದ್ದರೆಂದು ಗೊತ್ತಾಗಿದೆ. ಮರಣೋತ್ತರ ಪರೀಕ್ಷೆ ನಡೆಸಿ ಸಂಬಂಧಿಕರಿಗೆ ಮೃತದೇಹ ಹಸ್ತಾಂತರಿಸಲಾಗಿದೆ. ಆತ್ಮಹತ್ಯೆ ಬಗ್ಗೆ ಕುಟುಂಬದವರ ಹೇಳಿಕೆ ಪಡೆಯಬೇಕಿದೆ’ ಎಂದೂ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.