ಮಂಗಳವಾರ, ನವೆಂಬರ್ 29, 2022
21 °C

ಬೆಂಗಳೂರು: ಕಮಿಷನರ್ ಕಚೇರಿ ಎದುರು ಆತ್ಮಹತ್ಯೆಗೆ ಯತ್ನಿಸಿದ ವಿಜಯಪುರ ನಿವಾಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರ ಪೊಲೀಸ್ ಕಮಿಷನರ್ ಕಚೇರಿ ಎದುರೇ ಸಿದ್ಧರಾಮಗೌಡ ಎಂಬುವರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ಅಸ್ವಸ್ಥಗೊಂಡಿರುವ ಅವರಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

‘ವಿಜಯಪುರ ನಿವಾಸಿ ಸಿದ್ಧರಾಮಗೌಡ ಸೋಮವಾರ ಮಧ್ಯಾಹ್ನ ಕಮಿಷನರ್ ಕಚೇರಿಗೆ ಬಂದಿದ್ದರು. ಪ್ರವೇಶ ದ್ವಾರದಲ್ಲೇ ಏಕಾಏಕಿ ಕ್ರಿಮಿನಾಶಕ ಸೇವಿಸಿ ಕುಸಿದು ಬಿದ್ದಿದ್ದರು. ಅದನ್ನು ನೋಡಿದ್ದ ಸಿಬ್ಬಂದಿ, ಆಟೊದಲ್ಲಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಸಿದ್ಧರಾಮಗೌಡ ಮಗಳಿಗೆ ಪತಿ ವರದಕ್ಷಿಣೆ ಕಿರುಕುಳ ನೀಡಿದ್ದರು. ಈ ಬಗ್ಗೆ ಅಮೃತಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ಪೊಲೀಸರು ಆರೋಪಿಗಳ ವಿರುದ್ಧ ಕ್ರಮ ಕೈಗೊಂಡಿರಲಿಲ್ಲ. ಇದರಿಂದ ಬೇಸತ್ತು ಸಿದ್ಧರಾಮಗೌಡ ಕಮಿಷನರ್ ಅವರಿಗೆ ದೂರು ನೀಡಲು ಬಂದಿದ್ದರು. ಅವರ ಪ್ರಕರಣದ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ’ ಎಂದೂ ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು