ಭಾನುವಾರ, ಜೂಲೈ 12, 2020
23 °C
suicide

ಒಂದೇ ಕುಟುಂಬದ ಮೂವರ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಯಲಹಂಕ ಉಪನಗರ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಒಂದೇ ಕುಟುಂಬದ ಮೂವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಅನಂತಪುರ ನಿವಾಸಿ ವೆಂಕಟಪ್ಪ (54), ಅವರ ಪತ್ನಿ ನಾಗಮಣಿ (50) ಹಾಗೂ ಮಗ ರವಿ ಕುಮಾರ್ (27) ಆತ್ಮಹತ್ಯೆ ಮಾಡಿಕೊಂಡವರು. ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹಗಳು ಸಿಕ್ಕಿದ್ದು, ಆತ್ಮಹತ್ಯೆ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ’ ಎಂದು ಪೊಲೀಸರು ಹೇಳಿದರು.

‘ಹಲವು ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದ ವೆಂಕಟಪ್ಪ ಕುಟುಂಬ ಯಲಹಂಕ ಉಪನಗರದಲ್ಲಿ ವಾಸವಿತ್ತು. ವೆಂಕಟಪ್ಪ ರಿಯಲ್‌ ಎಸ್ಟೇಟ್‌ ವ್ಯವಹಾರ ಮಾಡುತ್ತಿದ್ದರು. ಮಗ ರವಿಕುಮಾರ್ ಸಹಾಯ ಮಾಡುತ್ತಿದ್ದರು. ಇನ್ನೊಬ್ಬ ಮಗ, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಪರಿಚಯಸ್ಥರೊಬ್ಬರ ಬಳಿ ವೆಂಕಟಪ್ಪ ಲಕ್ಷಾಂತರ ರೂಪಾಯಿ ಪಡೆದಿದ್ದರು. ಅದನ್ನು ವಾಪಸು ಕೊಟ್ಟಿರಲಿಲ್ಲ. ಸಾಲ ತೀರಿಸಲು ಆಗದಿದ್ದರಿಂದ ಮನ ನೊಂದು, ಪತ್ನಿ ಹಾಗೂ ಮಗನ ಸಮೇತ ನೇಣಿಗೆ ಶರಣಾಗಿದ್ದಾರೆ’ ಎಂದೂ ಪೊಲೀಸರು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು