ಬುಧವಾರ, ಜನವರಿ 27, 2021
16 °C

ಆತ್ಮಹತ್ಯೆ; ಫೈನಾನ್ಸ್ ಕಂಪನಿಗಳ ಕಿರುಕುಳ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೊಮ್ಮನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಶಶಿಧರ್ (49) ಎಂಬುವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಹೊಂಗಸಂದ್ರ ಬಾಲಾಜಿ ಲೇಔಟ್ ನಿವಾಸಿಯಾದ ಶಶಿಧರ್, ಪತ್ನಿ ಹಾಗೂ ಇಬ್ಬರ ಮಕ್ಕಳ ಜೊತೆ ವಾಸವಿದ್ದರು. ಪ್ರಿಂಟಿಂಗ್ ಪ್ರೆಸ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಲಾಕ್‌ಡೌನ್‌ನಿಂದಾಗಿ ಕೆಲಸ ಹೋಗಿತ್ತು. ಬೇರೆ ಎಲ್ಲಿಯೂ ಕೆಲಸ ಸಿಕ್ಕಿರಲಿಲ್ಲ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಶಶಿಧರ್, ಫೈನಾನ್ಸ್ ಕಂಪನಿ ಹಾಗೂ ಪರಿಚಯಸ್ಥರ ಬಳಿ ಸಾಲ ಮಾಡಿದ್ದರು. ಮನೆ ನಿರ್ಮಾಣಕ್ಕೂ ಗೃಹ ಸಾಲ ತೆಗೆದುಕೊಂಡಿದ್ದರು. ಕೆಲಸ ಇಲ್ಲದಿದ್ದರಿಂದ ಸಾಲ ಮರುಪಾವತಿಸಲು ಸಾಧ್ಯವಾಗಿರಲಿಲ್ಲ. ಸಾಲ ಮರುಪಾವತಿ ಮಾಡುವಂತೆ ಫೈನಾನ್ಸ್ ಕಂಪನಿ ಪ್ರತಿನಿಧಿಗಳು ಎಚ್ಚರಿಕೆ ನೀಡಿದ್ದರು. ಕಿರುಕುಳವನ್ನೂ ನೀಡುತ್ತಿದ್ದರು. ಅದರಿಂದ ನೊಂದು ಶಶಿಧರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಗತಿ ಸಂಬಂಧಿಕರು ನೀಡಿರುವ ದೂರಿನಲ್ಲಿದೆ’ ಎಂದೂ ಮೂಲಗಳು ತಿಳಿಸಿವೆ.

’ಬುಧವಾರ ರಾತ್ರಿ ಮನೆಯ ಪ್ರತ್ಯೇಕ ಕೊಠಡಿಯಲ್ಲಿ ಮಲಗಿದ್ದ ಶಶಿಧರ್, ಮರುದಿನ ಬೆಳಿಗ್ಗೆ ಕೊಠಡಿಯಿಂದ ಹೊರಗೆ ಬಂದಿರಲಿಲ್ಲ. ಅನುಮಾನಗೊಂಡ ಪತ್ನಿ, ಕೊಠಡಿಗೆ ಹೋಗಿ ನೋಡಿದಾಗಲೇ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಇತ್ತು. ಸ್ಥಳದಲ್ಲಿ ಮರಣ ಪತ್ರವೂ ಸಿಕ್ಕಿದೆ’ ಎಂದೂ ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು