ಸೋಮವಾರ, ಆಗಸ್ಟ್ 15, 2022
22 °C

ಕೆಲಸ ಹುಡುಕಿ ಬೆಂಗಳೂರಿಗೆ ಬಂದವ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆತ್ಮಹತ್ಯೆ–ಪ್ರಾತಿನಿಧಿಕ ಚಿತ್ರ

ಬೆಂಗಳೂರು: ಯಶವಂತಪುರ ರೈಲು ನಿಲ್ದಾಣ ಸಮೀಪದ ಮರವೊಂದಕ್ಕೆ ನೇಣು ಹಾಕಿಕೊಂಡು ತಿಮ್ಮರಾಜು (29) ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಶಿರಾ ತಾಲ್ಲೂಕಿನ ಚನ್ನೇನಹಳ್ಳಿಯ ತಿಮ್ಮರಾಜು, ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದರು. ಅವರ ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ’ ಎಂದು ಆರ್‌ಎಂಸಿ ಯಾರ್ಡ್ ಪೊಲೀಸರು ಹೇಳಿದರು.

‘ಗಾರ್ಮೆಂಟ್ಸ್‌ ಕಾರ್ಖಾನೆಯಲ್ಲಿ ತಿಮ್ಮರಾಜು ಕೆಲಸ ಮಾಡುತ್ತಿದ್ದರು. ಲಾಕ್‌ಡೌನ್‌ನಿಂದಾಗಿ ಕೆಲಸ ಹೋಗಿತ್ತು. ಅವಿವಾಹಿತರಾಗಿದ್ದ ಅವರು, ಕೊಠಡಿಯೊಂದರಲ್ಲಿ ವಾಸವಿದ್ದರು. ಮಾನಸಿಕವಾಗಿ ನೊಂದಿದ್ದರು ಎನ್ನಲಾದ ಅವರು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳೀಯರೊಬ್ಬರು ಗುರುವಾರ ಬೆಳಿಗ್ಗೆ ಮೃತದೇಹ ನೋಡಿ ಠಾಣೆಗೆ ಮಾಹಿತಿ ನೀಡಿದ್ದರು’ ಎಂದೂ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು