ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಡಿನಲ್ಲಿ ಸೆಲ್ಫಿಗೆ ₹ 1 ಸಾವಿರ ದಂಡ

Last Updated 18 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಚಾಮರಾಜನಗರ: ಅರಣ್ಯ ಪ್ರದೇಶದಲ್ಲಿ ಸೆಲ್ಫಿ ತೆಗೆದುಕೊಂಡರೆ ₹ 1 ಸಾವಿರ ದಂಡ ವಿಧಿಸಲು ಅರಣ್ಯ ಇಲಾಖೆ ನಿರ್ಧರಿಸಿದೆ.

ಕಾಡಿಗೆ ಹೊಂದಿಕೊಂಡಂತೆ ಇರುವ ರಸ್ತೆಗಳಲ್ಲಿ ವಿಶೇಷ ಗಸ್ತು ವ್ಯವಸ್ಥೆ ರೂಪಿಸಿ ವಾಹನದಿಂದ ಇಳಿದು ಸೆಲ್ಫಿ ತೆಗೆದುಕೊಳ್ಳುವವರಿಗೆ ದಂಡ ವಿಧಿಸಬೇಕು ಎಂದು ಪಿಸಿಸಿಎಫ್ ಪುನ್ನಾಟಿ ಶ್ರೀಧರ್ ಸೂಚಿಸಿದ್ದಾರೆ.

ಇದರ ಜತೆಗೆ, ಕಾಡಿನ ಮಧ್ಯೆ ಹಾದು ಹೋಗುವ ರಸ್ತೆಯಲ್ಲಿ ಸಂಚರಿಸುವ ವಾಹನಗಳ ಮೇಲೆ ತಂತ್ರಜ್ಞಾನದ ಸಹಾಯದಿಂದ ಇಲಾಖೆ ಹದ್ದಿನ ಕಣ್ಣಿಡಲಿದೆ. ಅರಣ್ಯದ ಒಂದು ಬದಿಯ ಚೆಕ್‌ಪೋಸ್ಟ್‌ನಲ್ಲಿ ವಾಹನ ಪ್ರವೇಶ ಪಡೆದ ಕೂಡಲೇ ಮತ್ತೊಂದು ಬದಿಯ ಚೆಕ್‌ಪೋಸ್ಟ್‌ಗೆ ಮಾಹಿತಿ ರವಾನೆಯಾಗಿರುತ್ತದೆ. ನಿಗದಿತ ಸಮಯದಲ್ಲಿ ಮತ್ತೊಂದು ಬದಿಯ ಚೆಕ್‌ಪೋಸ್ಟ್‌ಗೆ ವಾಹನ ಬಾರದೇ ತಡವಾದರೆ ಅಂತಹ ವಾಹನಗಳ ಚಾಲಕರ ಮೇಲೂ ದಂಡ ವಿಧಿಸಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT