ಬೆಂಗಳೂರು: ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡಲು ವಿವಿಧೆಡೆ ಹೆಚ್ಚುವರಿಯಾಗಿ ಟ್ರಿಪ್ ನಡೆಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ.

ಎಸ್ಎಂವಿಟಿ ಬೆಂಗಳೂರು–ಬೆಳಗಾವಿ ವಿಶೇಷ ಎಕ್ಸ್ಪ್ರೆಸ್ ರೈಲು ಏಪ್ರಿಲ್ 30 ಮತ್ತು ಮೇ 2ರಂದು ಸಂಜೆ 7ಕ್ಕೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ನಿಂದ ಹೊರಟು, ಮರುದಿನ ಬೆಳಿಗ್ಗೆ 7.30ಕ್ಕೆ ಬೆಳಗಾವಿಯನ್ನು ತಲುಪಲಿದೆ. ಬೆಳಗಾವಿಯಿಂದ ಮೇ 1 ಮತ್ತು 3ರಂದು ಸಂಜೆ 5.30ಕ್ಕೆ ಹೊರಟು, ಮರುದಿನ ಬೆಳಿಗ್ಗೆ 4.30ಕ್ಕೆ ಬೆಂಗಳೂರು ತಲುಪಲಿದೆ.

ಈ ರೈಲು ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.

ಯಶವಂತಪುರ–ವಿಜಯಪುರ ವಿಶೇಷ ಎಕ್ಸ್ಪ್ರೆಸ್ ರೈಲು ಯಶವಂತಪುರದಿಂದ ಏಪ್ರಿಲ್ 3ರಂದು ರಾತ್ರಿ 10ಕ್ಕೆ ಹೊರಟು, ಮರುದಿನ ಮಧ್ಯಾಹ್ನ 2:05ಕ್ಕೆ ವಿಜಯಪುರ ತಲುಪಲಿದೆ. ಅಲ್ಲಿಂದ ಮೇ 1ರಂದು ಸಂಜೆ 7ಕ್ಕೆ ಹೊರಟು, ಮರುದಿನ ಬೆಳಿಗ್ಗೆ 11.15ಕ್ಕೆ ಯಶವಂತಪುರ ತಲುಪಲಿದೆ.

ತುಮಕೂರು, ಅರಸೀಕೆರೆ, ಬೀರೂರು, ಚಿಕ್ಕಜಾಜೂರು, ಚಿತ್ರದುರ್ಗ, ರಾಯದುರ್ಗ, ಬಳ್ಳಾರಿ ಕಂಟೋನ್ಮೆಂಟ್, ತೋರಣಗಲ್ಲು, ಹೊಸಪೇಟೆ, ಕೊಪ್ಪಳ, ಗದಗ, ಬಾದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿ ನಿಲ್ದಾಣಗಳಲ್ಲಿ ಈ ರೈಲು ನಿಲುಗಡೆ ಹೊಂದಿರಲಿದೆ.

ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು–ಮದುರೈ ವಿಶೇಷ ಎಕ್ಸ್ಪ್ರೆಸ್ ರೈಲು ಏಪ್ರಿಲ್ 30ರಂದು ಸಂಜೆ 7ಕ್ಕೆ ಹೊರಟು, ಮರುದಿನ ಬೆಳಿಗ್ಗೆ 6.15ಕ್ಕೆ ಮದುರೈ ತಲುಪಲಿದೆ. ಮದುರೈನಿಂದ ಮೇ 1ರಂದು ಬೆಳಿಗ್ಗೆ 9.10ಕ್ಕೆ ಹೊರಟು, ಅದೇ ದಿನ ಸಂಜೆ 7.50ಕ್ಕೆ ಬೆಂಗಳೂರನ್ನು ತಲುಪಲಿದೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.