ಏಕ ಬಳಕೆ ಪ್ಲಾಸ್ಟಿಕ್: ₹62.57 ಲಕ್ಷ ದಂಡ ವಸೂಲಿ
ಜಿಬಿಎ ವ್ಯಾಪ್ತಿಯಲ್ಲಿ ಸೆ.3ರಿಂದ 16ರವರೆಗೆ ಒಟ್ಟು 30,421 ಕೆ.ಜಿ ಏಕ ಬಳಕೆಯ ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಗಿದ್ದು, ₹62.57 ಲಕ್ಷ ದಂಡ ವಸೂಲಿ ಮಾಡಲಾಗಿದೆ ಎಂದು ಬಿಎಸ್‌ಡಬ್ಲ್ಯುಎಂಎಲ್‌ನ ಸಿಇಒ ಕರೀಗೌಡ ತಿಳಿಸಿದರು.
361 ಸಗಟು ಮಾರಾಟಗಾರರು ಹಾಗೂ 5,220 ರೀಟೈಲ್ ಮಾರಾಟಗಾರರ ಮೇಲೆ ದಾಳಿ ನಡೆಸಲಾಗಿದೆ. ಸೆ.16ರಂದು ಒಂದೇ ದಿನ 3,630 ಕೆ.ಜಿ ಏಕ ಬಳಕೆ ಪ್ಲಾಸ್ಟಿಕ್ ವಶಪಡಿಸಿಕೊಂಡು, ₹11.25 ಲಕ್ಷ ದಂಡ ವಸೂಲಿ ಮಾಡಲಾಗಿದೆ ಎಂದರು.
ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಜಯನಗರ, ಪದ್ಮನಾಭನಗರ, ಬಿಟಿಎಂ ಲೇಔಟ್, ಬೊಮ್ಮನಹಳ್ಳಿಯಲ್ಲಿ ನಿಷೇಧಿತ ಏಕಬಳಕೆಯ ಪ್ಲಾಸ್ಟಿಕ್ ಮಳಿಗೆಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು 1,300.75 ಕೆ.ಜಿ ಪ್ಲಾಸ್ಟಿಕ್ ವಶಪಡಿಸಿಕೊಂಡು ₹2.95 ಲಕ್ಷ ದಂಡ ವಸೂಲಿ ಮಾಡಿದ್ದಾರೆ ಎಂದು ಅವರು
ತಿಳಿಸಿದರು.