ಶನಿವಾರ, 23 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಂಟಿಸಿ ಡಿಪೋ, ಓದಿದ ಶಾಲೆಗೆ ನಟ ರಜನಿಕಾಂತ್ ದಿಢೀರ್ ಭೇಟಿ

ಬೆಂಗಳೂರಿನ ಜಯನಗರದಲ್ಲಿರುವ ಬಿಎಂಟಿಸಿ ಡಿಪೋ ನಂಬರ್ –4ಕ್ಕೆ ದಿಢೀರ್ ಭೇಟಿ.
Published 29 ಆಗಸ್ಟ್ 2023, 8:08 IST
Last Updated 29 ಆಗಸ್ಟ್ 2023, 8:08 IST
ಅಕ್ಷರ ಗಾತ್ರ

ಬೆಂಗಳೂರು: ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ಇಂದು (ಮಂಗಳವಾರ) ಬೆಂಗಳೂರಿನ ಜಯನಗರದಲ್ಲಿರುವ ಬಿಎಂಟಿಸಿ ಡಿಪೋ ನಂಬರ್ –4ಕ್ಕೆ ದಿಢೀರ್ ಭೇಟಿ ನೀಡಿದ್ದಾರೆ.

ಇದೇ ವೇಳೆ ಡಿಪೋದಲ್ಲಿನ ಮೆಕ್ಯಾನಿಕ್, ಡ್ರೈವರ್, ಕಂಡಕ್ಟರ್‌ಗಳೊಂದಿಗೆ ಮಾತುಕತೆ ನಡೆಸಿದ ರಜನಿಕಾಂತ್, ಸಿಬ್ಬಂದಿಯೊಂದಿಗೆ ಫೋಟೊ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ. ರಜನಿಕಾಂತ್ ಅವರನ್ನು ಕಂಡು ಬಿಎಂಟಿಸಿ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಸುತ್ತಾಟ ನಡೆಸುತ್ತಿರುವ ರಜನಿ, ರಾಘವೇಂದ್ರಸ್ವಾಮಿ ದೇವಸ್ಥಾನ ಹಾಗೂ ಗಾಂಧಿಬಜಾರ್‌ನಲ್ಲಿರುವ ತಾವು ಓದಿದ ಶಾಲೆಗೆ ಭೇಟಿ ನೀಡುವ ಮೂಲಕ ಬಾಲ್ಯದ ದಿನಗಳನ್ನು ಮೆಲುಕು ಹಾಕುತ್ತಿದ್ದಾರೆ.

ಇತ್ತೀಚೆಗೆ ರಜನಿ ಅಭಿನಯದ ‘ಜೈಲರ್’ ಚಿತ್ರ ವಿಶ್ವದಾದ್ಯಂತ ತೆರೆಕಂಡಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT