ನವದೆಹಲಿ: ಅಧಿಕೃತ ರಹಸ್ಯ ಕಾಯ್ದೆಯಡಿ (ಒಎಸ್ಎ) ಪ್ರಕರಣ ದಾಖಲಾದ ಮಾತ್ರಕ್ಕೆ ಆರೋಪಿಗೆ ದೋಷಾರೋಪ ಪಟ್ಟಿಗೆ ಸಂಬಂಧಿಸಿದ ದಾಖಲೆಗಳನ್ನು ನೀಡಲು ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನ್ಯಾಯಮೂರ್ತಿಗಳಾದ ಜೆ.ಕೆ. ಮಾಹೇಶ್ವರಿ ಮತ್ತು ಅತುಲ್ ಎಸ್. ಚಾಂದೂರ್ಕರ್ ಅವರನ್ನೊಳಗೊಂಡ ಪೀಠವು, ‘ಸಂವಿಧಾನದ 21ನೇ ವಿಧಿಯಡಿ ಜೀವಿಸುವ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕಿನ ಅವಿಭಾಜ್ಯ ಅಂಗವಾಗಿರುವ ನ್ಯಾಯಸಮ್ಮತ ವಿಚಾರಣೆಯ ಹಕ್ಕು ಪ್ರತಿಯೊಬ್ಬರಿಗೂ ಇದೆ. ದೇಶದ ಭದ್ರತೆಯ ಕಾರಣ ನೀಡಿ ದಾಖಲೆಗಳನ್ನು ನೀಡಲು ನಿರಾಕರಿಸುವುದರಿಂದ ಆರೋಪಿಯ ನ್ಯಾಯಯುತ ವಿಚಾರಣೆಯ ಹಕ್ಕಿಗೆ ಗಂಭೀರ ಧಕ್ಕೆಯಾಗಲಿದೆ. ಹೀಗಾಗಿ, ರಹಸ್ಯವನ್ನು ಕಾಯ್ದುಕೊಳ್ಳಲು ಸೂಕ್ತ ವ್ಯವಸ್ಥೆ ಮಾಡಿಕೊಂಡು ಅಗತ್ಯ ದಾಖಲೆಗಳನ್ನು ಒದಗಿಸಬೇಕು’ ಎಂದು ಸೂಚಿಸಿದೆ.

ಯಾವುದೇ ಕ್ರಿಮಿನಲ್ ಪ್ರಕರಣದಲ್ಲಿ ಪೊಲೀಸರು ತನಿಖೆ ಮುಗಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದಾಗ, ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್, ಸಾಕ್ಷಿಗಳ ಹೇಳಿಕೆಗಳು ಸೇರಿದಂತೆ ಮುಖ್ಯ ದಾಖಲೆಗಳ ಪ್ರತಿಗಳನ್ನು ಆರೋಪಿಗೆ ಉಚಿತವಾಗಿ ನೀಡಬೇಕು. ಸಾವಿರಾರು ಪುಟಗಳ ದಾಖಲೆಗಳಿದ್ದಾಗ ಮಾತ್ರ, ಆರೋಪಿಯು ನ್ಯಾಯಾಲಯಕ್ಕೆ ಬಂದು ಮೂಲ ದಾಖಲೆಗಳನ್ನು ಪರಿಶೀಲಿಸಲು ನ್ಯಾಯಾಧೀಶರು ಅನುಮತಿ ನೀಡಬಹುದು ಎಂದು ಹೇಳಿದೆ.

ಭಾರತೀಯ ಸೇನೆಯ ನಿವೃತ್ತ ಮೇಜರ್ ಜನರಲ್ ವಿ.ಕೆ. ಸಿಂಗ್ ಅವರು ಸಲ್ಲಿಸಿದ್ದ ಅರ್ಜಿ ಸಂಬಂಧ ಪೀಠವು ಈ ಆದೇಶ ನೀಡಿದೆ. ಸಿಂಗ್ ಅವರು 2000 ಮತ್ತು 2004ರ ನಡುವೆ ಸಂಪುಟ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದರು.

ಸಿಂಗ್ ಅವರು 2007ರಲ್ಲಿ ಬರೆದ ‘ಇಂಡಿಯಾಸ್ ಎಕ್ಸ್ಟರ್ನಲ್ ಇಂಟೆಲಿಜೆನ್ಸ್– ಸೀಕ್ರೆಟ್ಸ್ ಆಫ್ ರಿಸರ್ಚ್ ಆ್ಯಂಡ್ ಅನಾಲಿಸಿಸ್ ವಿಂಗ್ (ರಾ)’ ಎಂಬ ಪುಸ್ತಕದ ಕಾರಣಕ್ಕೆ ಅವರ ವಿರುದ್ಧ ಅಧಿಕೃತ ರಹಸ್ಯಗಳ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.

‘ಈ ಪುಸ್ತಕವು ಅಧಿಕಾರಿಗಳ ಹೆಸರುಗಳು, ಸ್ಟೇಷನ್ ಕೋಡ್ಗಳು, ತಾಂತ್ರಿಕ ಯೋಜನೆಗಳು ಮತ್ತು ಗುಪ್ತಚರ ಮಾಹಿತಿ ಸೇರಿದಂತೆ ರಹಸ್ಯ ಮಾಹಿತಿಗಳನ್ನು ಬಹಿರಂಗಪಡಿಸಿದೆ. ಆ ಮೂಲಕ ರಾಷ್ಟ್ರೀಯ ಭದ್ರತೆಗೆ ಧಕ್ಕೆ ತಂದಿದೆ’ ಎಂದು ಪ್ರಾಸಿಕ್ಯೂಷನ್ ಆರೋಪಿಸಿತ್ತು. ಪ್ರಕಾಶಕ ವಿವೇಕ್ ಗರ್ಗ್ ಅವರನ್ನೂ ಆರೋಪಿಯನ್ನಾಗಿ ಹೆಸರಿಸಲಾಗಿದೆ.

2008ರಲ್ಲಿ ರಹಸ್ಯ ದಾಖಲೆಗಳನ್ನು ಮುಚ್ಚಿದ ಲಕೋಟೆಯಲ್ಲಿ ಇಡಬೇಕೆಂಬ ಮನವಿಯೊಂದಿಗೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಲಾಗಿತ್ತು. ಇದರಲ್ಲಿ ಉಲ್ಲೇಖಿಸಿರುವ ಕೆಲವು ದಾಖಲೆಗಳ ಪ್ರತಿಗಳನ್ನು ನೀಡುವಂತೆ ಕೋರಿ ಸಿಂಗ್ ಅವರು ಸಿಆರ್ಪಿಸಿ ಸೆಕ್ಷನ್ 207ರಡಿ ಅರ್ಜಿ ಸಲ್ಲಿಸಿದ್ದರು. ವಿಚಾರಣಾ ನ್ಯಾಯಾಲಯವು 2009ರಲ್ಲಿ ಈ ಅರ್ಜಿಯನ್ನು ಪುರಸ್ಕರಿಸಿದರೂ, ದೆಹಲಿ ಹೈಕೋರ್ಟ್ ಆ ಆದೇಶವನ್ನು ಮಾರ್ಪಡಿಸಿ, ಕೆಲ ದಾಖಲೆಗಳ ಪರಿಶೀಲನೆಗೆ ಮಾತ್ರ ಅನುಮತಿ ನೀಡಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-51-1709613922

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.