ಸೋಮವಾರ, ಅಕ್ಟೋಬರ್ 26, 2020
23 °C

ಸಚಿವ ಸುರೇಶ್ ‌ಕುಮಾರ್ ಕೋವಿಡ್‌ನಿಂದ ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೋವಿಡ್‌ಗೆ ಚಿಕಿತ್ಸೆ ಪಡೆಯುತ್ತಿದ್ದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್‌ ಗುಣಮುಖರಾಗಿದ್ದಾರೆ.

‘ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆ ಸೇರಿದ್ದೇನೆ. ಮುಂದಿನ ಎರಡು ವಾರ ಮನೆಯಿಂದ ಹೊರ ಹೋಗಬಾರದು ಎಂದು ವೈದ್ಯರು ಸಲಹೆ ನೀಡಿದ್ದಾರೆ’ ಎಂದು ಅವರು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

‘ಹೋಂ ಐಸೋಲೇಷನ್‌ನಲ್ಲಿದ್ದ ನನಗೆ ಉಸಿರಾಟದಲ್ಲಿ ವ್ಯತ್ಯಾಸ ಕಂಡು ಬಂದಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದೆ. ಸಿಟಿ–ಸ್ಕ್ಯಾನ್‌ ಮಾಡಿದಾಗ, ಶ್ವಾಸಕೋಶದಲ್ಲಿ ಸ್ವಲ್ಪ ಹೆಚ್ಚಿನ ಪ್ರಮಾಣದಲ್ಲಿಯೇ ಸೋಂಕು ಹರಡಿದ್ದು ಪತ್ತೆಯಾಗಿತ್ತು. ಚಿಕಿತ್ಸೆ ನೀಡಿ ಶುಶ್ರೂಷೆ ಮಾಡಿದ ಎಲ್ಲ ವೈದ್ಯರು ಮತ್ತು ಶುಶ್ರೂಷಕರಿಗೆ ಕೃತಜ್ಞತೆಗಳು’ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು