ಮಂಗಳವಾರ, ಫೆಬ್ರವರಿ 25, 2020
19 °C

ಒಮನ್‌ ಬಾಲಕಿಗೆ ಶಸ್ತ್ರಚಿಕಿತ್ಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಡಿವೈಟಿ 16 (ಒಂದು ಬಗೆಯ ಪಾರ್ಕಿನ್ಸನ್) ಎಂಬ ಅಪರೂಪದ ಕಾಯಿಲೆಯಿಂದ ಬಳಲು ತ್ತಿದ್ದ ಒಮನ್‌ನ 5 ವರ್ಷದ ಬಾಲಕಿಗೆ ನಗರದ ವಿಕ್ರಮ್ ಆಸ್ಪತ್ರೆಯ ವೈದ್ಯರು ನಡೆಸಿದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. 

ಈ ಕಾಯಿಲೆಯಿಂದಾಗಿ ಬಾಲಕಿ ದೈನಂದಿನ ಚಟುವಟಿಕೆಗೆ ಬೇರೆಯವರನ್ನು ಅವಲಂಬಿಸಬೇಕಾಗಿತ್ತು. ಹಾಸಿಗೆಯಿಂದ ಎದ್ದು ಓಡಾಡಲೂ ಸಾಧ್ಯವಾಗುತ್ತಿರಲಿಲ್ಲ. ಈ ಸಮಸ್ಯೆಯನ್ನು ಗುರುತಿಸಿದ ವಿಕ್ರಮ್ ಆಸ್ಪತ್ರೆಯ ಡಾ.ಎಲ್‌.ಕೆ.ಪ್ರಶಾಂತ್, ಡಾ.ಕಿರಣ್ ಖಾನಾಪುರೆ, ಡಾ.ಎಸ್.ರಾಘವೇಂದ್ರ ಅವರನ್ನು ಒಳಗೊಂಡ ವೈದ್ಯರ ತಂಡ, ನಿರಂತರ 7 ಗಂಟೆ ಶಸ್ತ್ರಚಿಕಿತ್ಸೆ ನಡೆಸಿದೆ.

ಡಾ.ಎಲ್‌.ಕೆ.ಪ್ರಶಾಂತ್, ‘ಇದುವರೆಗೆ ವಿಶ್ವದಾದ್ಯಂತ ಕೇವಲ ನಾಲ್ಕು ಜನರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಬಾಲಕಿಗೆ ಶಸ್ತ್ರಚಿಕಿತ್ಸೆ ನಡೆಸಿ ಒಂದು ತಿಂಗಳಾಗಿದ್ದು, ಆಕೆಯ ಆರೋಗ್ಯದಲ್ಲಿ ಗಮನಾರ್ಹವಾದ ಸುಧಾರಣೆ ಕಂಡು ಬರುತ್ತಿದೆ’ ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)