ಬೆಂಗಳೂರು: ಕೊರೊನಾ ಸೋಂಕಿತ 96 ವರ್ಷದ ವೃದ್ಧರೊಬ್ಬರಿಗೆ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಹಿಪ್ ರೀಪ್ಲೆಸ್‌ಮೆಂಟ್ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

ಪಾರ್ಶ್ವವಾಯುವಿಗೆ ಒಳಗಾಗಿದ್ದ ಅವರು ಅಧಿಕ ರಕ್ತದೊತ್ತಡ ಸಮಸ್ಯೆಯಿಂದಲೂ ಬಳಲುತ್ತಿದ್ದರು. ಈ ನಡುವೆ ಅವರು ಸೊಂಟ ಮುರಿತದಿಂದ ಹಾಸಿಗೆ ಹಿಡಿದಿದ್ದರು. ಸ್ಥಳೀಯ ಆಸ್ಪತ್ರೆಗೆ ತೆರಳಿ ತಪಾಸಣೆ ಮಾಡಿಸಿಕೊಂಡಾಗ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿತು. ಗಂಭೀರವಾಗಿ ಅಸ್ವಸ್ಥರಾಗಿದ್ದರಿಂದ ಕೃತಕ ಉಸಿರಾಟದ ಸಂಪರ್ಕ ಕಲ್ಪಿಸಿ, ಅವರಿಗೆ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ವೈಟ್‌ಫೀಲ್ಡ್‌ನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ, ತಪಾಸಣೆ ನಡೆಸಲಾಯಿತು.

ಕುಟುಂಬದ ಸದಸ್ಯರ ಒಪ್ಪಿಗೆ ಪಡೆದ ವೈದ್ಯರು, ಸೊಂಟದ ಶಸ್ತ್ರಚಿಕಿತ್ಸೆ ನಡೆಸಿದರು. ಮೂರು ವಾರಗಳ ಬಳಿಕ ಅವರು ಪೂರ್ಣ ಪ್ರಮಾಣದಲ್ಲಿ ಚೇತರಿಸಿಕೊಂಡಿದ್ದು, ಮೊದಲಿನಂತೆ ನಡೆದಾಡಲು ಪ್ರಾರಂಭಿಸಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ.

ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ. ಕುಮಾರದೇವ್ ಅರವಿಂದ್, ‘96 ವರ್ಷವಾದರೂ ಶಸ್ತ್ರಚಿಕಿತ್ಸೆಯ ಬಳಿಕ
ಬೇಗ ಚೇತರಿಸಿಕೊಂಡಿದ್ದಾರೆ. ನಿಯಮಿತವಾಗಿ ಯೋಗ ಮತ್ತು ವ್ಯಾಯಾಮ ಮಾಡುತ್ತಿದ್ದರಿಂದ ಅವರು ಕೋವಿಡ್ ಜಯಿಸಲು ಸಾಧ್ಯವಾಯಿತು. ಈಗ ಯಾರ ಸಹಾಯ ಇಲ್ಲದೆಯೂ ಅವರು ನಡೆದಾಡುತ್ತಿದ್ದಾರೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.