ಸಾಲುಮರದ ತಿಮ್ಮಕ್ಕಗೆ ಶಸ್ತ್ರಚಿಕಿತ್ಸೆ

ಬೆಂಗಳೂರು: ಸೊಂಟದ ಮೂಳೆ ಮುರಿತಕ್ಕೆ ಒಳಗಾಗಿದ್ದ ಸಾಲುಮರದ ತಿಮ್ಮಕ್ಕ ಅವರಿಗೆ ನಗರ ಅಪೊಲೊ ಆಸ್ಪತ್ರೆಯಲ್ಲಿ ಸೊಂಟದ ಶಸ್ತ್ರಚಿಕಿತ್ಸೆಯನ್ನು ಬುಧವಾರ ನಡೆಸಲಾಗಿದೆ.
ಹಾಸನದ ಬೇಲೂರಿನಲ್ಲಿ ಸಾಕುಮಗನ ಮನೆಯಲ್ಲಿ ವಾಸವಿರುವ ಅವರು, ಕಳೆದ ಭಾನುವಾರ ಸಂಜೆ ಕುಸಿದು ಬಿದ್ದಿದ್ದರು. ಇದರಿಂದಾಗಿ ಅವರ ಸೊಂಟದ ಮೂಳೆ ಮುರಿದಿತ್ತು. ಅವರಿಗೆ ಹಾಸನದ ಮಣಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಶಸ್ತ್ರಚಿಕಿತ್ಸೆ ಅಗತ್ಯವಿದ್ದ ಕಾರಣ ಜಯನಗರದ ಅಪೊಲೊ ಆಸ್ಪತ್ರೆಗೆ ಕರೆತರಲಾಗಿತ್ತು. ವೈದ್ಯರು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿದ್ದು, ತಿಮ್ಮಕ್ಕ ಅವರು ತೀವ್ರ ನಿಗಾ ಘಟಕದಲ್ಲಿ ಇದ್ದಾರೆ.
‘ತಿಮ್ಮಕ್ಕ ಅವರಿಗೆ ಬೇರೆ ಯಾವುದೇ ಅನಾರೋಗ್ಯ ಸಮಸ್ಯೆಗಳಿಲ್ಲ. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಬೇಗ ಚೇತರಿಸಿಕೊಳ್ಳುವ ಭರವಸೆಯನ್ನೂ ನೀಡಿದ್ದಾರೆ. ಇದೇ ಮೊದಲ ಬಾರಿ ಈ ರೀತಿ ಬಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ’ ಎಂದು ತಿಮ್ಮಕ್ಕ ಅವರ ಸಾಕುಮಗ ಉಮೇಶ್ ತಿಳಿಸಿದರು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.