ಗುರುವಾರ , ಅಕ್ಟೋಬರ್ 22, 2020
21 °C
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‍ಸಿಂಗ್‍ ಸುರ್ಜೆವಾಲಾ ಆರೋಪ

ಬಂಡವಾಳಶಾಹಿ ಹಿಡಿತದಲ್ಲಿ ದೇಶ: ಸುರ್ಜೇವಾಲ ಟೀಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೇವನಹಳ್ಳಿ: 'ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಂಡವಾಳಶಾಹಿಗಳ ಕಪಿಮುಷ್ಟಿಯಲ್ಲಿದೆ. ಕೇಂದ್ರ ಬಿಜೆಪಿ ಸರ್ಕಾರ ಈ ದೇಶವನ್ನೂ ಬಂಡವಾಳಶಾಹಿಗಳಿಗೆ ಒಪ್ಪಿಸಲು ನಿರ್ಧಾರ ಮಾಡಿದಂತಿದೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ರಣದೀಪ್‍ಸಿಂಗ್‍ ಸುರ್ಜೆವಾಲಾ  ಆರೋಪಿಸಿದ್ದಾರೆ.

ಕಾಂಗ್ರೆಸ್‌ ನಾಯಕರ ಸಭೆಯಲ್ಲಿ ಪಾಲ್ಗೊಳ್ಳಲು ಭಾನುವಾರ ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರು ಸುದ್ದಿಗಾರರ ಜತೆ ಮಾತನಾಡಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಮೊದಲು 5 ವರ್ಷಗಳ ಆಡಳಿತ ಅವಧಿಯಲ್ಲಿ ನೀಡಿದ ಭರವಸೆಗಳು ಹುಸಿಯಾಗಿವೆ ಎಂದರು.

ಚೇತರಿಕೆ ಕಾಣದ ಆರ್ಥಿಕ ವ್ಯವಸ್ಥೆ 

ಅನಗತ್ಯ ನೋಟು ರದ್ದು ನಿರ್ಧಾರದಿಂದ ದೇಶದ ಆರ್ಥಿಕ ವ್ಯವಸ್ಥೆ ಇನ್ನೂ ಚೇತರಿಕೆ ಕಂಡಿಲ್ಲ. ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ನೀಡಬೇಕಾದ ಜಿಎಸ್‍ಟಿ ಪಾಲು ನೀಡದೆ ಸತಾಯಿಸುತ್ತಿದೆ. ದೇಶದಲ್ಲಿ ಉಂಟಾಗಿರುವ ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಕೇಂದ್ರ ಸರ್ಕಾರ ತಲೆಕೆಡಿಸಿಕೊಂಡಿಲ್ಲ ಎಂದು ಆರೋಪಿಸಿದರು.

ಕಾಂಗ್ರೆಸ್‌ ಪಕ್ಷದ ರಾಜ್ಯದ ಉಸ್ತುವಾರಿಯಾಗಿ ಮೊದಲ ಬಾರಿಗೆ ಬೆಂಗಳೂರಿಗೆ ಬಂದಿಳಿದ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ಕಾರ್ಯಕರ್ತರು ಬರಮಾಡಿಕೊಂಡರು. ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ವಿವಿಧ ಘಟಕದ ಕಾಂಗ್ರೆಸ್‍ ಪದಾಧಿಕಾರಿಗಳು ಇದ್ದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು