ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾತ್ರಿ 11ರವರೆಗೆ ಮನೆ ಮನೆಗೆ ಭೇಟಿ

ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ–ಸುತ್ತೋಲೆಯಲ್ಲಿ ಉಲ್ಲೇಖ
Last Updated 8 ಆಗಸ್ಟ್ 2019, 20:15 IST
ಅಕ್ಷರ ಗಾತ್ರ

ಬೆಂಗಳೂರು: ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಮುಖ್ಯವಾಹಿನಿಗೆ ತರಲು ಸಮೀಕ್ಷೆ ನಡೆಸುವುದಕ್ಕಾಗಿ ಪ್ರತಿ ತಿಂಗಳು 8 ಮತ್ತು 9ರಂದು ಸಂಜೆ 6ರಿಂದ ರಾತ್ರಿ 11ರವರೆಗೆ ಪ್ರಾಥಮಿಕ ಶಾಲಾ ಶಿಕ್ಷಕರು ಮನೆ ಮನೆಗೆ ಭೇಟಿ ನೀಡಬೇಕು ಎಂಬ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಸುತ್ತೋಲೆ ವಿವಾದ ಸೃಷ್ಟಿಸಿದೆ.

ಈ ಸುತ್ತೋಲೆ ಹೊರಬೀಳುತ್ತಿದ್ದಂತೆಯೇಗುರುವಾರ ಹಲವಾರು ಶಿಕ್ಷಕರು ಅದರಲ್ಲೂ ಮುಖ್ಯವಾಗಿ ಮಹಿಳೆಯರು ಅಸಹನೆ ವ್ಯಕ್ತಪಡಿಸಿದ್ದು, ತಮ್ಮ ಸಂಘದ ಮೂಲಕ ಸರ್ಕಾರಕ್ಕೆ ಮನವರಿಕೆ ಮಾಡುವ ಪ್ರಯತ್ನ ಮಾಡಿದರು.

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎನ್‌.ಚಂದ್ರಶೇಖರ್ ಅವರು ಮುಖ್ಯ ಕಾರ್ಯದರ್ಶಿ ಟಿ.ಎನ್‌.ವಿಜಯಭಾಸ್ಕರ್ ಅವರನ್ನು ಭೇಟಿ ಮಾಡಿ ವಾಸ್ತವ ಸಮಸ್ಯೆಗಳನ್ನು ವಿವರಿಸಿದರು.

’ಸಮೀಕ್ಷೆಯಲ್ಲಿ ಶಿಕ್ಷಕಿಯರನ್ನು ಸೇರಿಸಿಕೊಳ್ಳುವುದು ಬೇಡ, ಪುರುಷ ಶಿಕ್ಷಕರೂ ರಾತ್ರಿ 9 ಗಂಟೆಯವರೆಗೆ ಸಮೀಕ್ಷೆ ನಡೆಸಿದರೆ ಸಾಕು’ ಎಂದು ಮುಖ್ಯ ಕಾರ್ಯದರ್ಶಿಯವರು ಮೌಖಿಕವಾಗಿ ಸೂಚಿಸಿದರು ಎಂದು ಚಂದ್ರಶೇಖರ್ ‘ಪ್ರಜಾವಾಣಿ’ಗೆ ತಿಳಿಸಿದರು.

ಆಯುಕ್ತ ಡಾ.ಕೆ.ಜಿ.ಜಗದೀಶ್ ಅವರನ್ನೂ ಭೇಟಿ ಮಾಡಿ ಸಮಸ್ಯೆಯನ್ನು ಗಮನಕ್ಕೆ ತರಲಾಗಿದೆ. ಅವರು ಸಹ ಶಿಕ್ಷಕರಿಂದ ರಾತ್ರಿ 9 ಗಂಟೆಯವರೆಗೆ ಮಾತ್ರ ಸಮೀಕ್ಷೆ ನಡೆಸುವುದಕ್ಕೆ ಸಮ್ಮತಿ ಸೂಚಿಸಿದರು ಎಂದು ಅವರು ವಿವರಿಸಿದರು.

13–14ರಂದು ಸಮೀಕ್ಷೆ: ಈ ಬಾರಿ ವರಮಹಾಲಕ್ಷ್ಮಿ ವ್ರತ ಇರುವುದರಿಂದ ಇದೇ 13 ಮತ್ತು 14ರಂದು ಸಮೀಕ್ಷೆ ನಡೆಸಲಾಗುವುದು ಎಂದು ಆಯುಕ್ತರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT