ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರಿಗೆ ಶೇ 50ರಷ್ಟು ನಿವೇಶನ: ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

Last Updated 4 ಸೆಪ್ಟೆಂಬರ್ 2021, 21:59 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಗೃಹ ಮಂಡಳಿಯು ಸೂರ್ಯನಗರ ಎರಡನೇ ಹಂತದ ಬಡಾವಣೆ ನಿರ್ಮಾಣಕ್ಕಾಗಿ ಆನೇಕಲ್‌ ತಾಲ್ಲೂಕಿನ ಕಸಬಾ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಸ್ವಾಧೀನಪಡಿಸಿಕೊಂಡಿರುವ 110 ಎಕರೆ 18 ಗುಂಟೆ ಜಮೀನಿನ ಮಾಲೀಕರಿಗೆ ಅಭಿವೃದ್ಧಿಪಡಿಸಿದ ನಿವೇಶನಗಳಲ್ಲಿ ಅರ್ಧದಷ್ಟನ್ನು ಪರಿಹಾರ ರೂಪದಲ್ಲಿ ನೀಡಲು ಶನಿವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

‘ಹಲವು ವರ್ಷಗಳಿಂದ ಭೂಸ್ವಾಧೀನ ಪ್ರಕ್ರಿಯೆ ಕಗ್ಗಂಟಾಗಿತ್ತು. ಪರಿಹಾರ ವಿತರಣೆಗೆ ಸಂಬಂಧಿಸಿದಂತೆ ರೈತರು ಮತ್ತು ಗೃಹ ಮಂಡಳಿ ನಡುವೆ ಸಹಮತ ಮೂಡಿರಲಿಲ್ಲ. ಈಗ ಅಭಿವೃದ್ಧಿಪಡಿಸಿದ ನಿವೇಶನಗಳನ್ನು ರೈತರು ಮತ್ತು ಗೃಹ ಮಂಡಳಿಗೆ ನಡುವೆ ಶೇಕಡ 50ರ ಅನುಪಾತದಲ್ಲಿ ಹಂಚಿಕೆ ಮಾಡುವ ಪ್ರಸ್ತಾವಕ್ಕೆ ಸಂಪುಟ ಸಭೆ ಒಪ್ಪಿಗೆ ನೀಡಿದೆ’ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.

ಆನೇಕಲ್‌ ತಾಲ್ಲೂಕಿನ ಜಿಗಣಿ ಹೋಬಳಿಯ ಕೊಪ್ಪ ಗ್ರಾಮದಲ್ಲಿ ಆಶ್ರಯ ಯೋಜನೆಗಾಗಿ ರಾಜೀವ್‌ ಗಾಂಧಿ ವಸತಿ ನಿಗಮಕ್ಕೆ ಹಂಚಿಕೆ ಮಾಡಿದ್ದ 2 ಎಕರೆ 10 ಗುಂಟೆ ಜಮೀನನ್ನು ಅರಣ್ಯ ಇಲಾಖೆ ತೆರವುಗೊಳಿಸಿತ್ತು. ಆ ಜಮೀನನ್ನು ವಸತಿ ಯೋಜನೆಗೆ ಪುನಃ ಹಂಚಿಕೆ ಮಾಡಿ, ಅರಣ್ಯ ಇಲಾಖೆಗೆ ಪರ್ಯಾಯ ಜಮೀನು ನೀಡಲು ನಿರ್ಧರಿಸಲಾಗಿದೆ ಎಂದರು.

ಆದೇಶ ರದ್ದು: ಜಕ್ಕೂರಿನ ಸರ್ಕಾರಿ ವೈಮಾನಿಕ ತರಬೇತಿ ಸಂಸ್ಥೆಯ ಕಾರ್ಯಾಚರಣೆಗೆ ಪೂರಕವಾಗಿ ‘ರಾಜೀವ್‌ ಗಾಂಧಿ ಏರೋ ಸ್ಪೋರ್ಟ್ಸ್‌ ಸೊಸೈಟಿ’ ಸ್ಥಾಪಿಸಲು 2018ರಲ್ಲಿ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು ತೀರ್ಮಾಸಲಾಯಿತು. ಸರ್ಕಾರಿ– ಖಾಸಗಿ ಸಹಭಾಗಿತ್ವದಲ್ಲಿ ಯೋಜನೆ ಅನುಷ್ಠಾನಕ್ಕೆ ನಿರ್ಧರಿಸಲಾಯಿತು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT