ಬೆಂಗಳೂರು: ಮಲ್ಲೇಶ್ವರದಲ್ಲಿ ಸೋಮವಾರ ಮಧ್ಯಾಹ್ನ ಅನುಮಾನಾಸ್ಪದ ಸೂಟ್‌ಕೇಸ್ ಪತ್ತೆಯಾಗಿದ್ದು, ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಪರಿಶೀಲನೆ ನಡೆಸಿದರು.

ಮಲ್ಲೇಶ್ವರ ಠಾಣೆ ವ್ಯಾಪ್ತಿಯ ರಸ್ತೆಯೊಂದರ ಪಕ್ಕದಲ್ಲಿ ಸೂಟ್‌ಕೇಸ್ ಕಂಡಿತ್ತು. ಅದನ್ನು ನೋಡಿದ್ದ ಸ್ಥಳೀಯರು, ‘ಸೂಟ್‌ಕೇಸ್‌ನಲ್ಲಿ ಬಾಂಬ್ ಇರಬಹುದು’ ಎಂದು ಅನುಮಾನಪಟ್ಟು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸೂಟ್‌ಕೇಸ್‌ನಿಂದಾಗಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಸ್ಥಳಕ್ಕೆ ಬಂದ ಪೊಲೀಸರು, ಸೂಟ್‌ಕೇಸ್ ಇದ್ದ ಜಾಗದಲ್ಲಿ ಸಾರ್ವಜನಿಕರ ಓಡಾಟ ನಿರ್ಬಂಧಿಸಿದ್ದರು. ನಂತರ, ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಕಾರ್ಯಾಚರಣೆ ನಡೆಸಿದರು. ಸೂಟ್‌ಕೇಸ್ ತೆರೆದಾಗ ಬಟ್ಟೆಗಳು ಮಾತ್ರ ಇದ್ದವು. ಆ ನಂತರವೇ ಸ್ಥಳೀಯರು ನಿಟ್ಟುಸಿರು ಬಿಟ್ಟರು.

ಈ ಬಗ್ಗೆ ಪ್ರತಿಕ್ರಿಯಿಸಿದ ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರಕುಮಾರ್ ಮೀನಾ, ‘ಸೂಟ್‌ಕೇಸ್‌ನಲ್ಲಿ ಸ್ಫೋಟಕ ವಸ್ತು ಇರುವ ಆತಂಕವಿತ್ತು. ಪರಿಶೀಲಿಸಿದಾಗ ಯಾವುದೇ ಅನುಮಾನಾಸ್ಪದ ವಸ್ತುಗಳು ಇರಲಿಲ್ಲ. ಬಟ್ಟೆಗಳು ಮಾತ್ರ ಇದ್ದವು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.