ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಕುಮಾರಸ್ವಾಮಿಗೆ ಸುವರ್ಣಶ್ರೀ, ಬಾನಂದೂರುಗೆ ಜಾನಪದ ವಿಭೂತಿ ಪ್ರಶಸ್ತಿ

Last Updated 14 ನವೆಂಬರ್ 2022, 21:00 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರಿನ ವಿಭೂತಿಪುರ ವೀರಸಿಂಹಾಸನ ಸಂಸ್ಥಾನ ಮಠ ನೀಡುವ 2022ನೇ ಸಾಲಿನ ಸುವರ್ಣಶ್ರೀ ಪ್ರಶಸ್ತಿಗೆ ಸಂಸ್ಕೃತ ಸಂಶೋಧಕರಾದ ಡಾ. ಶಿವಕುಮಾರಸ್ವಾಮಿ ಹಾಗೂ ಜಾನಪದ ವಿಭೂತಿ ಪ್ರಶಸ್ತಿಗೆ ಜನಪದ ಸಂಗೀತ ಹಾಡುಗಾರ ಬಾನಂದೂರು ಕೆಂಪಯ್ಯ ಅವರನ್ನು ಆಯ್ಕೆ ಮಾಡಲಾಗಿದೆ.

ಸುವರ್ಣಶ್ರೀ ಪ್ರಶಸ್ತಿಯು ₹50 ಸಾವಿರ ನಗದು, ಕಂಚಿನ ಪ್ರಶಸ್ತಿ ಪತ್ರ ಮತ್ತು ನೆನಪಿನ ಕಾಣಿಕೆ ಹೊಂದಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಇದೇ 21ರಂದು ನಡೆಯಲಿದೆ. ಅದೇ ದಿನ ಮಠದ ಶ್ರೀ ಜಗದ್ಗುರು ಪಂಚಾಚಾರ್ಯ ಕಲ್ಯಾಣ ಮಂಟಪದಲ್ಲಿ ನಡೆಯುವ ವೀರಭದ್ರಸ್ವಾಮಿ ಜಾತ್ರಾ ಮಹೋತ್ಸವ, ಜಗದ್ಗುರು ರೇಣುಕಾದಿ ಪಂಚಾಚಾರ್ಯ ಯುಗಮಾನೋತ್ಸವ, ಬಸವಾದಿ ಶಿವಶರಣರ ಮತ್ತು ಪೂಜ್ಯಶ್ರೀ ಸುವರ್ಣಲಿಂಗ ಶಿವಾಚಾರ್ಯ ಸ್ವಾಮೀಜಿ ಅವರ 21ನೇ ಸಂಸ್ಮರಣೋತ್ಸವ ನಡೆಯಲಿದೆ.

ಜಾನಪದ ವಿಭೂತಿ ಪ್ರಶಸ್ತಿಯು ₹ 25 ಸಾವಿರ ನಗದು, ಕಂಚಿನ ಪ್ರಶಸ್ತಿ ಪತ್ರ ಮತ್ತು ನೆನಪಿನ ಕಾಣಿಕೆಯನ್ನು ಒಳಗೊಂಡಿದೆ. ಈ ಇದೇ 20ರ ಭಾನುವಾರ ಸಂಜೆ 6ಕ್ಕೆ ಶ್ರೀಮಠದ ಶ್ರೀ ಜಗದ್ಗುರು ಪಂಚಾಚಾರ್ಯ ಕಲ್ಯಾಣ ಮಂಟಪದಲ್ಲಿ ನಡೆಯುವ ಜಾನಪದೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಈ ಎರಡೂ ಕಾರ್ಯಕ್ರಮಗಳ ಸಾನಿಧ್ಯವನ್ನು ವಾರಾಣಸಿಯ ಕಾಶಿಪೀಠದ ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದು, ಮಠದ ಪಟ್ಟಾಧ್ಯಕ್ಷರಾದ ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸಲಿದ್ದಾರೆ ಎಂದು ಮಠದ ಕಾರ್ಯದರ್ಶಿ ಸಿ. ಬಸವರಾಜು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT