ಶನಿವಾರ, ಮೇ 21, 2022
23 °C

ಸ್ವಚ್ಛ ಸರ್ವೇಕ್ಷಣ್ ಸ್ಪರ್ಧೆ: ಬೆಂಗಳೂರು ಮಹಾನಗರಕ್ಕೆ ಪ್ರಶಸ್ತಿ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಕೇಂದ್ರ ಸರ್ಕಾರ ಏರ್ಪಡಿಸಿದ್ದ ಸ್ವಚ್ಛ ಸರ್ವೇಕ್ಷಣ್ 2021 ಸಫಾಯಿ ಮಿತ್ರ ಸುರಕ್ಷಾ ಸ್ಪರ್ಧೆಯಲ್ಲಿ  ಬೆಂಗಳೂರು ಮಹಾನಗರವು ಪ್ರಶಸ್ತಿ ಪಡೆದಿದೆ.

ಈ ಸಾಧನೆಗೆ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಹರ್ಷ ವ್ಯಕ್ತಪಡಿಸಿದ್ದಾರೆ. 

ಈ ಪುರಸ್ಕಾರಕ್ಕಾಗಿ ಬೆಂಗಳೂರು ನಗರದ ನಾಗರಿಕರು, ಬಿಬಿಎಂಪಿಯ ಸ್ವಚ್ಛತಾ ಸಿಬ್ಬಂದಿಗಳು, ಅಧಿಕಾರಿಗಳು, ಇದಕ್ಕಾಗಿ ಮಾರ್ಗದರ್ಶನ ಮಾಡಿದ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿ ವರ್ಗದವರನ್ನು ರಾಕೇಶ್  ಸಿಂಗ್   ಅವರು  ಅಭಿನಂದಿಸಿದ್ದಾರೆ.

ನ. 20 ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಏರ್ಪಡಿಸಿರುವ ಸ್ವಚ್ಛ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸ್ವಚ್ಛ ಸರ್ವೇಕ್ಷಣ್ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು