ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

12 ದೇವಸ್ಥಾನಗಳಲ್ಲಿ ‘ಸ್ವಚ್ಛ ಮಂದಿರ ಅಭಿಯಾನ’

ಇದೇ 10ರಂದು ಶಶಿಕಲಾ ಜೊಲ್ಲೆ ಅವರಿಂದ ಅಭಿಯಾನಕ್ಕೆ ಚಾಲನೆ
Last Updated 4 ಫೆಬ್ರುವರಿ 2023, 18:38 IST
ಅಕ್ಷರ ಗಾತ್ರ

ಬೆಂಗಳೂರು: ಮುಜರಾಯಿ ಅಧೀನದ ದೇವಾಲಯಗಳ ಪರಿಸರದಲ್ಲಿ ಸ್ವಚ್ಛತೆ ಕಾಪಾಡುವ ಉದ್ದೇಶದಿಂದ ಮುಜರಾಯಿ ಇಲಾಖೆ ‘ಸ್ವಚ್ಛ ಮಂದಿರ ಅಭಿಯಾನ’ ಹಮ್ಮಿಕೊಂಡಿದೆ. ಈ ಮೂಲಕ ಶೂನ್ಯ ತ್ಯಾಜ್ಯ ದೇವಸ್ಥಾನಗಳನ್ನಾಗಿ ಪರಿವರ್ತಿಸಲಾಗುವುದು.

ಇದೇ 10 ರಂದು ಶ್ರೀರಂಗಪಟ್ಟಣದ ನಿಮಿಷಾಂಬ ದೇವಸ್ಥಾನದಲ್ಲಿ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಅವರು ಈ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ ಎಂದು ಇಲಾಖೆ ಆಯುಕ್ತೆ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ.

ಮುಜರಾಯಿ ಅಧೀನದದೇ ವಾಲಯಗಳಲ್ಲಿ ಹೆಚ್ಚುತ್ತಿರುವ ಘನ ತ್ಯಾಜ್ಯ ನಿರ್ವಹಣೆಯ ಸಮಸ್ಯೆಯನ್ನು ಈ ಯೋಜನೆಯ ಮೂಲಕ ಪರಿಣಾಮ ಕಾರಿಯಾಗಿ ನಿರ್ವಹಿಸಲಾಗುವುದು. ಮೊದಲ ಹಂತದಲ್ಲಿ ರಾಜ್ಯದ ಪ್ರಮುಖ 12 ದೇವಸ್ಥಾನಗಳಲ್ಲಿ ಈ ಅಭಿಯಾನಕ್ಕೆ ನಡೆಸಲಾಗುವುದು. ನಿಮಿಷಾಂಬ ದೇವಸ್ಥಾನದ ಜತೆಗೆ ಉಳಿದ 11 ದೇವಸ್ಥಾನಗಳಲ್ಲಿ ಈ ಅಭಿಯಾನಕ್ಕೆ ವರ್ಚುವಲ್‌ ಮೂಲಕ ಚಾಲನೆ ನೀಡಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ವಿವರಿಸಿದ್ದಾರೆ.

ದೇವಸ್ಥಾನಗಳಲ್ಲಿ ಸ್ವಚ್ಛ ಪರಿಸರವಿಲ್ಲದೇ ಭಕ್ತರು ತೊಂದರೆ ಅನುಭವಿಸುತ್ತಿದ್ದರು. ‘ಸ್ವಚ್ಛ ಮಂದಿರ ಅಭಿಯಾನ’ ದಡಿ ದೇವಾಲಯಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ಸಂಗ್ರಹಿಸುವುದು, ಸಾಗಿಸುವುದು, ಸಂಸ್ಕರಿಸುವುದು ಮತ್ತು ವಿಲೇವಾರಿ ಮಾಡಲು ಅಗತ್ಯ ವ್ಯವಸ್ಥೆ ಮಾಡಲಾಗುವುದು. ಮೂಲದಲ್ಲೇ ತ್ಯಾಜ್ಯವನ್ನು ಪ್ರತ್ಯೇಕಿಸಲಾಗುವುದು. ಈ ಮೂಲಕ ದೇವಸ್ಥಾನಗಳನ್ನು ಸುಸ್ಥಿರ ಸಂಸ್ಥೆ ಮತ್ತು ಶೂನ್ಯ ತ್ಯಾಜ್ಯ ಆವರಣವಾಗಿ ಮಾಡುವ ಗುರಿ ಹೊಂದಲಾಗಿದೆ ಎಂದು ಅವರು ಹೇಳಿದ್ದಾರೆ.

ಮೊದಲ ಹಂತದ ದೇವಸ್ಥಾನಗಳು–

l→ನಿಮಿಷಾಂಬ ದೇವಾಲಯ, ಗಂಜಾಂ, ಶ್ರೀರಂಗಪಟ್ಟಣ, ಮಂಡ್ಯ ಜಿಲ್ಲೆ

l→ಬನಶಂಕರಿ ದೇವಾಲಯ, ಕರಿಯಪ್ಪ ರಸ್ತೆ, ಬೆಂಗಳೂರು ನಗರ ಜಿಲ್ಲೆ

l→ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ, ಬೆಂಗಳೂರು ಗ್ರಾಮಾಂತರ ಜಿಲ್ಲೆ

l→ರೇವಣ ಸಿದ್ಧೇಶ್ವರ ದೇವಾಲಯ, ರಾಮನಗರ ತಾಲ್ಲೂಕು, ರಾಮನಗರ ಜಿಲ್ಲೆ

l→ಕಬ್ಬಾಳಮ್ಮ ದೇವಾಲಯ, ಕನಕಪುರ ತಾಲ್ಲೂಕು, ರಾಮನಗರ ಜಿಲ್ಲೆ

l→ಕೆಂಗಲ್ ಆಂಜನೇಯ ಸ್ವಾಮಿ ದೇವಾಲಯ, ರಾಮನಗರ ಜಿಲ್ಲೆ

l→ರಂಗನಾಥಸ್ವಾಮಿ ದೇವಾಲಯ, ಶ್ರೀರಂಗಪಟ್ಟಣ, ಮಂಡ್ಯ ಜಿಲ್ಲೆ

l→ಚೆನ್ನಕೇಶವಸ್ವಾಮಿ ದೇವಾಲಯ, ಬೇಲೂರು ತಾಲ್ಲೂಕು, ಹಾಸನ ಜಿಲ್ಲೆ

l→ದುರ್ಗಾ ಪರಮೇಶ್ವರಿ ದೇವಾಲಯ, ಮಂದಾರ್ತಿ, ದಕ್ಷಿಣ ಕನ್ನಡ ಜಿಲ್ಲೆ

l→ಗುರು ತಿಪ್ಪೇರುದ್ರಸ್ವಾಮಿ ದೇವಾಲಯ, ನಾಯಕನಹಟ್ಟಿ, ಚಳ್ಳಕೆರೆ, ಚಿತ್ರದುರ್ಗ ಜಿಲ್ಲೆ

l→ಲಕ್ಷ್ಮಿನರಸಿಂಹಸ್ವಾಮಿ ದೇವಾಲಯ, ದೇವರಾಯನ ದುರ್ಗ, ತುಮಕೂರು ಜಿಲ್ಲೆ

l→ಪೊಳಲಿ ರಾಜರಾಜೇಶ್ವರಿ ದೇವಾಲಯ, ದಕ್ಷಿಣ ಕನ್ನಡ ಜಿಲ್ಲೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT