ಬೆಂಗಳೂರು: ‘ಶೈಕ್ಷಣಿಕ ಕ್ರಾಂತಿಯಿಂದ ದೇಶದ ಪ್ರಗತಿ ಮತ್ತು ಸಾಮಾಜಿಕ ನ್ಯಾಯ ಸ್ಥಾಪನೆ ಸಾಧ್ಯ’ ಎಂದು ಸಮಾಜ ಸೇವಕ ಎನ್.ಸ್ವರೂಪ್ ಕುಮಾರ್ ತಿಳಿಸಿದರು.
ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬೆಂಗಳೂರು ದಕ್ಷಿಣ ವಲಯದ ವತಿಯಿಂದ ಬೊಮ್ಮನಹಳ್ಳಿಯಲ್ಲಿ ಆಯೋಜಿಸಿದ್ದ ಶೈಕ್ಷಣಿಕ ಕಾರ್ಯಾಗಾರ ಮತ್ತು ನಿವೃತ್ತ ಶಿಕ್ಷಕರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಆಧುನಿಕತೆಯ ಅಬ್ಬರದದಲ್ಲಿ ಪರಂಪರೆ ಮತ್ತು ಮೌಲ್ಯಗಳು ಕುಸಿಯುತ್ತಿವೆ. ಗುರುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಗೌರವ ಇಲ್ಲ. ಎಲ್ಲವೂ ಇಂಟರ್‌ನೆಟ್‌ನಲ್ಲಿ ಸಿಗುತ್ತದೆ ಎನ್ನುವಸಮೂಹ ಸನ್ನಿಗೆ ಒಳಗಾಗಿದ್ದೇವೆ. ಇದರ ಬಗ್ಗೆ ಶಿಕ್ಷಕರು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು’ ಎಂದರು.
ಸಂಘದ ನಿಕಟಪೂರ್ವ ಅಧ್ಯಕ್ಷ ವಿ.ಎಂ.ನಾರಾಯಣಸ್ವಾಮಿ, ‘ಶಿಕ್ಷಕರು ಜ್ಞಾನದ ಬೆಳಕು ಎಂದು ಶಿಕ್ಷಕರ ದಿನದಂದು ಭಾಷಣ ಬಿಗಿಯುತ್ತಾರೆ. ಆದರೆ, ಹೋರಾಟ ನಡೆಸಿಯೇ ಶಿಕ್ಷಕರುವೇತನ, ಸೌಲಭ್ಯ ಪಡೆಯುವ ಅನಿವಾರ್ಯ ಸ್ಥಿತಿ ಇದೆ’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.