ಭಾನುವಾರ, 1 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಿಗ್ಗಿ ಡೆಲಿವರಿ ಬಾಯ್‌ಗೆ ಬೆದರಿಸಿ ಸುಲಿಗೆ

Published 16 ಆಗಸ್ಟ್ 2023, 1:54 IST
Last Updated 16 ಆಗಸ್ಟ್ 2023, 1:54 IST
ಅಕ್ಷರ ಗಾತ್ರ

ಬೆಂಗಳೂರು: ಪುಲಿಕೇಶಿನಗರ ಠಾಣೆ ವ್ಯಾಪ್ತಿಯಲ್ಲಿ ‘ಸ್ವಿಗ್ಗಿ’ ಡೆಲಿವರಿ ಬಾಯ್‌ಗೆ ಚಾಕು ತೋರಿಸಿ ಬೆದರಿಸಿ ಸುಲಿಗೆ ಮಾಡಲಾಗಿದ್ದು, ಕೃತ್ಯದ ದೃಶ್ಯ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

‘ಸೋಮವಾರ ಮಧ್ಯಾಹ್ನ ನಡೆದಿರುವ ಸುಲಿಗೆ ಸಂಬಂಧ ಡೆಲಿವರಿ ಬಾಯ್ ದೂರು ನೀಡಿದ್ದಾರೆ. ಮೂವರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ದೂರುದಾರ, ಆಹಾರದ ಪೊಟ್ಟಣ ವಿತರಿಸಲು ವಿವೇಕಾನಂದ ನಗರಕ್ಕೆ ಬಂದಿದ್ದರು. ರಸ್ತೆ ಬದಿ ಬೈಕ್‌ ನಿಲ್ಲಿಸಿದ್ದರು. ಮನೆಯೊಂದಕ್ಕೆ ಆಹಾರ ಪೊಟ್ಟಣ ಕೊಟ್ಟು ವಾಪಸು ಬೈಕ್ ಬಳಿ ಬಂದಿದ್ದರು. ಒಂದೇ ಬೈಕ್‌ನಲ್ಲಿ ಸ್ಥಳಕ್ಕೆ ಬಂದಿದ್ದ ಮೂವರು ಆರೋಪಿಗಳು, ಚಾಕು ತೋರಿಸಿ ಬೆದರಿಸಿದ್ದರು.’

‘ದೂರುದಾರ ಬಳಿಯ ₹1,000 ನಗದು ಹಾಗೂ ಮೊಬೈಲ್ ಕಿತ್ತುಕೊಂಡು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳದಲ್ಲಿರುವ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಕೃತ್ಯ ಸೆರೆಯಾಗಿದ್ದು, ಅದನ್ನು ಆಧರಿಸಿ ಆರೋಪಿಗಳನ್ನು ಪತ್ತೆ ಮಾಡಲಾಗುತ್ತಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT