ಭಾನುವಾರ, 12 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಬ್ರಾಹಿಂ ಘನತೆ ಇಲ್ಲದ ನಾಯಕ: ಟಿ.ಎ. ಶರವಣ ವಾಗ್ದಾಳಿ

Published 21 ನವೆಂಬರ್ 2023, 16:28 IST
Last Updated 21 ನವೆಂಬರ್ 2023, 16:28 IST
ಅಕ್ಷರ ಗಾತ್ರ

ಬೆಂಗಳೂರು: ‘ಕಾಲಕ್ಕೆ ತಕ್ಕಂತೆ ಬಣ್ಣ ಬದಲಾಯಿಸುವ ಸಿ.ಎಂ. ಇಬ್ರಾಹಿಂ ರಾಜಕಾರಣದಲ್ಲಿ ಘನತೆ ಇಲ್ಲದ ನಾಯಕ’ ಎಂದು ವಿಧಾನ ಪರಿಷತ್‌ನ ಜೆಡಿಎಸ್‌ ಸದಸ್ಯ ಟಿ.ಎ. ಶರವಣ ವಾಗ್ದಾಳಿ ನಡೆಸಿದರು.

‘ಶರವಣ ಅವರಿಗೆ ವಿಧಾನ ಪರಿಷತ್‌ ಚುನಾವಣೆಯ ಟಿಕೆಟ್‌ ನೀಡಲು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹಣ ಪಡೆದಿದ್ದರು’ ಎಂಬ ಇಬ್ರಾಹಿಂ ಆರೋಪದ ಕುರಿತು ಸುದ್ದಿಗಾರರಿಗೆ ಮಂಗಳವಾರ ಪ್ರತಿಕ್ರಿಯಿಸಿದ ಅವರು, ‘ಇಬ್ರಾಹಿಂ ಗಾಜಿನ ಮನೆಯಲ್ಲಿ ಕುಳಿತು ಬೇರೆಯವರ ಮೇಲೆ ಕಲ್ಲು ತೂರುವುದನ್ನು ನಿಲ್ಲಿಸಲಿ’ ಎಂದರು.

‘ಪಕ್ಷಕ್ಕೆ ನಾನು ಈವರೆಗೆ ಯಾವುದೇ ಸೇವೆ ಮಾಡಿದ್ದರೂ ಅದು ಸ್ವಯಂಪ್ರೇರಿತ. ಯಾರೊಬ್ಬರೂ ನನ್ನಿಂದ ಏನನ್ನೂ ಕೇಳಿಲ್ಲ’ ಎಂದು ಹೇಳಿದರು.

‘ಎಚ್‌.ಡಿ. ದೇವೇಗೌಡರು ಪಿತೃ ಸಮಾನ, ಕುಮಾರಸ್ವಾಮಿ ಸಹೋದರನಿದ್ದಂತೆ ಎನ್ನುತ್ತಿದ್ದ ಇಬ್ರಾಹಿಂ, ಈಗ ಊಸರವಳ್ಳಿಯಂತೆ ಬಣ್ಣ ಬದಲಿಸುತ್ತಿದ್ದಾರೆ. ಪಕ್ಷದ ಎಲ್ಲ ತೀರ್ಮಾನಗಳಲ್ಲಿ ಭಾಗಿಯಾಗಿದ್ದ ಅವರು ಈಗ ಸುಳ್ಳು ಹೇಳಿತ್ತಿದ್ದಾರೆ’ ಎಂದು ಟೀಕಿಸಿದರು.

ನೈತಿಕತೆ ಇದೆಯೆ?: ‘ಇಬ್ರಾಹಿಂ ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷರಾಗಿದ್ದರು. ತಮ್ಮ ಮಗನಿಗೇ ಹುಮ್ನಾಬಾದ್‌ ಕ್ಷೇತ್ರದಲ್ಲಿ ಟಿಕೆಟ್‌ ನೀಡಿದ್ದರು. ದೇವೇಗೌಡರ ಪುತ್ರ ಪ್ರೇಮದ ಬಗ್ಗೆ ಮಾತನಾಡಲು ಇವರಿಗೆ ಯಾವ ನೈತಿಕತೆ ಇದೆ’ ಎಂದು ಶರವಣ ಪ್ರಶ್ನಿಸಿದರು.

ನಗರದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ತಾಯಿ ಮತ್ತು ಮಗು ಸಾವಿಗೀಡಾದ ಘಟನೆಗೆ ರಾಜ್ಯ ಸರ್ಕಾರವೇ ಹೊಣೆ. ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮತ್ತು ಇಂಧನ ಸಚಿವ ಕೆ.ಜೆ. ಜಾರ್ಜ್‌ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT