ಬುಧವಾರ, ಜುಲೈ 6, 2022
21 °C

ಕ್ರಿಕೆಟ್ ಬೆಟ್ಟಿಂಗ್; ₹ 3.50 ಲಕ್ಷ ಜಪ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಟಿ–20’ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ₹ 3.50 ಲಕ್ಷ ಜಪ್ತಿ ಮಾಡಿದ್ದಾರೆ.

‘ಓಂಪ್ರಕಾಶ್, ಸತ್ಪಾಲ್ ಸಿಂಗ್ ಹಾಗೂ ಗೇವರ್‌ ಚಂದ್ ಬಂಧಿತರು. ಬ್ಯಾಡರಹಳ್ಳಿ ಠಾಣೆ ವ್ಯಾಪ್ತಿಯ ಮೂರು ಸ್ಥಳಗಳ ಮೇಲೆ ಪ್ರತ್ಯೇಕವಾಗಿ ದಾಳಿ ನಡೆಸಿ ಅವರನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಪಾಕಿಸ್ತಾನ್ – ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ – ವೆಸ್ಟ್ ಇಂಡೀಸ್, ಇಂಗ್ಲೆಂಡ್ – ಬಾಂಗ್ಲಾದೇಶ, ಸ್ಕಾಟ್ಲೆಂಡ್ – ನಮೀಬಿಯಾ ನಡುವಿನ ಪಂದ್ಯಗಳ ಮೇಲೆ ಆರೋಪಿಗಳು ಬೆಟ್ಟಿಂಗ್ ನಡೆಸಿದ್ದರು. ಇದಕ್ಕಾಗಿ ಮೊಬೈಲ್ ಆ್ಯಪ್‌ಗಳನ್ನು ಬಳಸುತ್ತಿದ್ದರು. ಸೋಲು ಹಾಗೂ ಗೆಲುವಿನ ಲೆಕ್ಕಾಚಾರದಲ್ಲಿ ಹಣ ಕಟ್ಟಿಸಿಕೊಳ್ಳುತ್ತಿದ್ದರು’ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು