ಸೋಮವಾರ, ಜೂನ್ 1, 2020
27 °C

ಅಂತರಜಿಲ್ಲಾ ಸಾರಿಗೆ ಪಾಸ್‌: ತಹಶೀಲ್ದಾರ್‌ ವಿತರಿಸುವಂತಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅಂತರ ಜಿಲ್ಲಾ ಸಾರಿಗೆ ಪಾಸ್‌ಗಳನ್ನು ತಹಶೀಲ್ದಾರ್‌ಗಳು ವಿತರಿಸುವಂತಿಲ್ಲ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಹಂತದಲ್ಲಿ ಮಾತ್ರ ಈ ಪಾಸ್‌ಗಳನ್ನು ನೀಡಬಹುದು ಎಂದು ರಾಜ್ಯದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್‌ ಸೋಮವಾರ ಆದೇಶ ಮಾಡಿದ್ದಾರೆ.

ಕೆಲವು ಕಡೆ ತಹಶೀಲ್ದಾರ್‌ಗಳು ಅಂತರಜಿಲ್ಲಾ ಸಾರಿಗೆ ಪಾಸ್‌ ವಿತರಿಸುವುದು ಗಮನಕ್ಕೆ ಬಂದಿದೆ. ಈ ವ್ಯವಸ್ಥೆಯನ್ನು ನಿಲ್ಲಿಸಿ, ಜಿಲ್ಲಾಧಿಕಾರಿ ಅಥವಾ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಮಾತ್ರ ಈ ಪಾಸ್‌ ವಿತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸೂಚಿಸಿದ್ದಾರೆ ಎಂದು ಮುಖ್ಯ ಕಾರ್ಯದರ್ಶಿಯವರು ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು