ಭಾನುವಾರ, ಏಪ್ರಿಲ್ 11, 2021
33 °C

ನೀರಿನ ಅಭಾವ ತಡೆಗೆ ಕ್ರಮ ವಹಿಸಿ: ಸಚಿವ ಬೈರತಿ ಬಸವರಾಜ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೆ.ಆರ್.ಪುರ: ನೀರಿನ ಅಭಾವ ತಡೆಯಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಲಮಂಡಳಿ ಅಧಿಕಾರಿಗಳಿಗೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಸೂಚಿಸಿದರು.

ಕ್ಷೇತ್ರದ ಎ.ನಾರಾಯಣಪುರದಲ್ಲಿ ಜಲಮಂಡಳಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ರ ನೂತನ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು.

ಬೇಸಿಗೆ ಸನ್ನಹಿತವಾಗಿರುವ ಹಿನ್ನೆಲೆ ಕ್ಷೇತ್ರದಲ್ಲಿ ನೀರಿನ ಅಭಾವ ಬಾರದಂತೆ ಮುನ್ನೆಚ್ಚೆರಿಕಾ ಕ್ರಮಗಳನ್ನ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಸಾರ್ವಜನಿಕರು ಕೂಡಾ ಅನಾವಶ್ಯಕವಾಗಿ ನೀರನ್ನು ಪೋಲು ಮಾಡದೇ ಮಿತವಾಗಿ ಬಳಸುವಂತೆ ಮನವಿ ಮಾಡಿದರು.

ರಾಜ್ಯ‌ ಬಿಜೆಪಿ ಮಹಿಳಾ‌ಮೋರ್ಚಾ ಅಧ್ಯಕ್ಷೆ ಗೀತಾ ವಿವೇಕಾನಂದ ಬಾಬು, ಸುರೇಶ್, ಎಸ್ .ಜಿ.ನಾಗರಾಜ್, ಅಧಿಕಾರಿಗಳಾದ ವೆಂಕಟೇಶ್, ಪ್ರದೀಪ್, ವೆಂಕಟರಮಣಪ್ಪ, ಎಸ್. ಸಿ. ನಾಯಕ್ ಮತ್ತಿತರರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು