‘ವಾಸುದೇವ ಹೊಳ್ಳ, ಜೆ.ಎಸ್.ಡಿ. ಪಾಣಿ, ಕಿರಣ್ ಪೂಜಾರಿ ಎಂಬುವವರು ಆಯುಷ್ ಇಲಾಖೆಯ ಕೆಲವು ಅಧಿಕಾರಿಗಳ ವಿರುದ್ಧ ಮತ್ತು ಇಲಾಖೆಯ ಕಾರ್ಯನಿರ್ವಹಣೆಯ ಬಗ್ಗೆ ಗುರುತರವಾದ ಆರೋಪ ಮಾಡಿ ಆರೋಗ್ಯ ಸಚಿವಾಲಯಕ್ಕೆ, ಮುಖ್ಯಮಂತ್ರಿ ಸಚಿವಾಲಯಕ್ಕೆ, ಮುಖ್ಯ ಕಾರ್ಯದರ್ಶಿಯವರಿಗೆ ನಿರಂತರ ದೂರು ನೀಡುತ್ತಿದ್ದಾರೆ. ಈ ದೂರುಗಳ ಬಗ್ಗೆ ತನಿಖೆ ನಡೆಸಿ ಸತ್ಯಾಂಶ ಕಂಡುಬಂದಲ್ಲಿ ಅಧಿಕಾರಿಗಳ ಮೇಲೆ ಶಿಸ್ತು ಕ್ರಮಕ್ಕೆ ಪ್ರಸ್ತಾವ ಸಲ್ಲಿಸುವಂತೆ ಸೂಚಿಸಿದ್ದೆ. ಆದರೆ, ಕರ್ತವ್ಯಕ್ಕೆ ಅಡಚಣೆ ಉಂಟು ಮಾಡಲು ಹಾಗೂ ಸ್ವಹಿತಾಸಕ್ತಿ ರಕ್ಷಣೆಗಾಗಿ ದೂರು ನೀಡುತ್ತಿದ್ದಾರೆ ಎಂದು ಅಧಿಕಾರಿಗಳು ನನ್ನನ್ನು ಭೇಟಿ ಮಾಡಿ ಹೇಳಿದ್ದಾರೆ’ ಎಂದು ಸಚಿವರು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೆ ಸೋಮವಾರ ಹೊರಡಿಸಿರುವ ಟಿಪ್ಪಣಿಯಲ್ಲಿ ನಿರ್ದೇಶನ ನೀಡಿದ್ದಾರೆ.