ಬೆಂಗಳೂರು: ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಅಭಾವ ಎದುರಾಗದಂತೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದರು.

ಮಹಾದೇವಪುರ ವಲಯದ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ಮಹದೇವಪುರ ವ್ಯಾಪ್ತಿಯಲ್ಲಿ 31, ಕೆ.ಆರ್. ಪುರದಲ್ಲಿ 11 ಸೇರಿ ಒಟ್ಟು 42 ಹಳ್ಳಿಗಳಿವೆ. ವಲಯ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಹೆಚ್ಚಿರುವ ಪ್ರದೇಶಗಳಲ್ಲಿ ಸಿಂಟೆಕ್ಸ್ ಟ್ಯಾಂಕ್‌ಗಳನ್ನು ಅಳವಡಿಸಿ ಜಲಮಂಡಳಿಯಿಂದ ನೀರಿನ ಪೂರೈಕೆ ಮಾಡಬೇಕು’ ಎಂದು ಅಧಿಕಾರಿಗಳಿಗೆ ತಿಳಿಸಿದರು.

ವಲಯ ವ್ಯಾಪ್ತಿಯಲ್ಲಿ 46 ಶುದ್ಧ ಕುಡಿಯುವ ನೀರಿನ ಘಟಕಗಳು ಬರಲಿದ್ದು, 42 ಘಟಕಗಳು ಕಾರ್ಯನಿರ್ವಹಿಸುತ್ತಿವೆ. 4 ಘಟಕಗಳು ಸ್ಥಗಿತಗೊಂಡಿದ್ದು, ಆ ಘಟಕಗಳಿಗೆ ಕೂಡಲೇ ತಾತ್ಕಾಲಿಕ ವ್ಯವಸ್ಥೆ ಮಾಡಿಕೊಂಡು ನೀರು ಪೂರೈಸಬೇಕು ಎಂದು ಸಲಹೆ ನೀಡಿದರು.

ಜಲಮಂಡಳಿಯ ಜಲ ಸಂಗ್ರಹಾಗಾರಗಳಲ್ಲಿ ಏಕ ಕಾಲದಲ್ಲಿ ಮೂರು–ನಾಲ್ಕು ಟ್ಯಾಂಕರ್‌ಗಳಿಗೆ ನೀರು ಪೂರೈಕೆ ಮಾಡಲು ಸುಲಭವಾಗುವಂತೆ ಪೈಪ್ ಅಳವಡಿಸಿಕೊಳ್ಳಬೇಕು. ಎಷ್ಟು ಕೊಳವೆ ಬಾವಿಗಳು ಕಾರ್ಯನಿರ್ವಹಿಸುತ್ತಿವೆ? ಎಷ್ಟು ಬತ್ತಿ ಹೋಗಿವೆ? ಎಷ್ಟು ಕೊಳವೆ ಬಾವಿಗಳಿಗೆ ವಿದ್ಯುತ್ ಸಮಸ್ಯೆಯಿದೆ? ಎಷ್ಟು ಯಂತ್ರಗಳು ಹಾಳಾಗಿವೆ? ಎಲ್ಲೆಲ್ಲಿ ಹೊಸ ಕೊಳವೆ ಬಾವಿಗಳನ್ನು ಕೊರೆಯಬೇಕಿದೆ ಎಂಬುದನ್ನು ಸರಿಯಾಗಿ ಪರಿಶೀಲಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಈಗಾಗಲೇ ಸ್ವಯಂ ನೋಂದಣಿಯಾಗಿರುವ ಟ್ಯಾಂಕರ್‌ಗಳನ್ನು ವಲಯವಾರು ನಿಯೋಜಿಸಲಾಗಿದೆ. ನೋಂದಣಿಯಾಗಿರುವ ಟ್ಯಾಂಕರ್‌ಗಳಿಗೆ ಕಡ್ಡಾಯವಾಗಿ ಸ್ಟಿಕರ್‌ಗಳನ್ನು ಅಂಟಿಸಬೇಕು. ಟ್ಯಾಂಕರ್ ಮಾಲೀಕರ ವಿವರ, ನೋಂದಣಿ ಪ್ರಮಾಣಪತ್ರ ಸಹಿತ ವಿವರ ನೀಡಬೆಕು ಎಂದು ತಿಳಿಸಿದರು.

ವಲಯ ಆಯುಕ್ತ ರಮೇಶ್, ವಿಪತ್ತು ನಿರ್ವಹಣೆಯ ನೋಡಲ್ ಅಧಿಕಾರಿ ಸುರೋಳ್ಕರ್ ವಿಕಾಸ್ ಕಿಶೋರ್, ಜಂಟಿ ಆಯುಕ್ತೆ ದಾಕ್ಷಾಯಿಣಿ, ಮುಖ್ಯ ಎಂಜಿನಿಯರ್ ಲೋಕೇಶ್, ಕಾರ್ಯಪಾಲಕ ಎಂಜಿನಿಯರ್, ಜಲಮಂಡಳಿ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.