ಮಂಗಳವಾರ, ಜನವರಿ 21, 2020
28 °C

ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸುವ ಶಿಕ್ಷಕರ ವಿರುದ್ಧ ಕ್ರಮ: ಸುರೇಶ್ ಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿ,  ಅವನ ಸಹೋದರಿಗೆ ಬೆದರಿಕೆ ಹಾಕಿದ ಘಟನೆ ನಡೆದ ನಗರದ ಕೋರಮಂಗಲದ ಆಡುಗೋಡಿಯ ಖಾಸಗಿ ಶಾಲೆಗೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಶನಿವಾರ ದಿಢೀರ್ ಬೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ರೀತಿಯ ಘಟನೆ ಮರುಕಳಿಸಿದರೆ ಶಾಲೆಯ ಮಾನ್ಯತೆಯನ್ನೇ ರದ್ದುಪಡಿಸಿ, ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಖಡಕ್‌ ಎಚ್ಚರಿಕೆ ನೀಡಿದರು.

ಶಿಕ್ಷಕಿಯೊಬ್ಬರು 7ನೇ ತರಗತಿ ವಿದ್ಯಾರ್ಥಿಯ ತಲೆಗೆ ಡಸ್ಟರ್‌ನಿಂದ ರಕ್ತ ಸುರಿಯುಂತೆ ಹೊಡೆದಿದ್ದಲ್ಲದೆ, ಅದೇ ಶಾಲೆಯಲ್ಲಿ ಓದುತ್ತಿರುವ ಆತನ ಅಕ್ಕನಿಗೆ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಶಾಲೆಯಿಂದ ಹೊರಹಾಕುವುದಾಗಿ ಶಾಲಾ ಆಡಳಿತ ವರ್ಗವೇ ಬೆದರಿಕೆ ಹಾಕಿದೆ. ಈ ಬಗ್ಗೆ ಪತ್ರಿಕಾ ವರದಿಗಳನ್ನು ಗಮನಿಸಿ ಶನಿವಾರ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು.

ಹಲ್ಲೆಗೊಳಗಾದ ವಿದ್ಯಾರ್ಥಿ, ಆತನ ಸಹೋದರಿ, ತಾಯಿ ಮತ್ತು ಅಜ್ಜಿಯೊಂದಿಗೆ ಮಾತನಾಡಿ ಶಾಲೆಯಲ್ಲಿ ನಡೆದ ಘಟನೆಯ ಬಗ್ಗೆ ಸಚಿವರು ಮಾಹಿತಿ ಪಡೆದರು. ಆ ಶಾಲೆಯ ಶಿಕ್ಷಕರೊಬ್ಬರು ವಿದ್ಯಾರ್ಥಿಯ ಸೋದರಿ ಜೊತೆ ಅಶ್ಲೀಲವಾಗಿ ಮಾತನಾಡಿದ್ದನ್ನು ಗಂಭೀರವಾಗಿ ಪರಿಗಣಿಸಿ ಆ ಶಿಕ್ಷಕರನ್ನು ಕೆಲಸದಿಂದ ವಜಾ ಮಾಡುವಂತೆ ಆಡಳಿತ ಮಂಡಳಿಗೆ ಸೂಚಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು